ಇದು ಬರೀ ಬೆಳಕಲ್ಲ,ದರ್ಶನ ಕಾಂತಾರ ಫಸ್ಟ್ ಲುಕ್ ಟೀಸರ್ ಹೇಗಿದೆ ನೋಡಿ!
ಇದು ಬರೀ ಬೆಳಕಲ್ಲ,ದರ್ಶನ ಕಾಂತಾರ ಫಸ್ಟ್ ಲುಕ್ ಟೀಸರ್ ಹೇಗಿದೆ ನೋಡಿ!
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ ಚಾಪ್ಟರ್ 1 ಫಸ್ಟ್ ಲುಕ್ ರಿಲಿಸ್ ಆಗಿದೆ. ಕಾಂತಾರ-1′ ಅಭಿಮಾನಿಗಳ ಕುತೂಹಲವನ್ನು ದ್ವಿಗುಣ ಮಾಡುವ ರೀತಿಯಲ್ಲಿ ಚಿತ್ರದ ಪೋಸ್ಟ್ ಮೂಡಿಬಂದಿದೆ. ಇಂದು ಚಿತ್ರತಂಡ ಉಡುಪಿ ಜಿಲ್ಲೆಯ, ಕುಂದಾಪುರ ತಾಲೂಕಿನ ಆನೆಗುಡ್ಡೆ ದೇವಸ್ಥಾನದಲ್ಲಿ ‘ಕಾಂತಾರ ಚಾಪ್ಟರ್ 1’ ಚಿತ್ರದ ಮುಹೂರ್ತ ನೆರವೇರಿಸುವುದರ ಜೊತೆಗೆ ಮೊದಲ ಪೋಸ್ಟರ್ ಅನಾವರಣ ಮಾಡಿದೆ.
ಕನ್ನಡ ಚಿತ್ರರಂಗದ ಕೀರ್ತಿ ಪತಾಕೆಯನ್ನು ಮತ್ತಷ್ಟು ಎತ್ತರಕ್ಕೆ ಹಾರಿಸಿದ ಸಿನಿಮಾ ಎಂದರೆ ಕಾಂತಾರ. ಸಿನಿಪ್ರಿಯರು ಮಾತ್ರವಲ್ಲದೇ ಇಡೀ ಭಾರತೀಯ ಚಿತ್ರರಂಗದ ಖ್ಯಾತನಾಮರು ಸಹ ಮೆಚ್ಚಿ ಕೊಂಡಾಡಿದ ಅದ್ಭುತ ಚಿತ್ರ. ಅಪಾರ ಸಂಖ್ಯೆಯ ಪ್ರೇಕ್ಷಕರ ಮನಗೆದ್ದಿರುವ ಕಾಂತಾರದ ಮತ್ತೊಂದು ಭಾಗ ನಿರ್ಮಾಣಗೊಳ್ಳುತ್ತಿರುವುದು ನಿಮಗೆ ತಿಳಿದಿರುವ ವಿಚಾರವೇ.ನಟ-ನಿರ್ದೇಶಕ ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಮೂಡಿಬಂದ ಕಾಂತಾರ 2022ರ ಹಿಟ್ ಚಲನಚಿತ್ರವಾಗಿ ಹೊರಹೊಮ್ಮಿತು.ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳಲ್ಲಿ ಪೋಸ್ಟ್ ಶೇರ್ ಮಾಡಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ”ಇದು ಬರಿ ಬೆಳಕಲ್ಲ, ದರ್ಶನ” ಕಾಂತಾರ ಪ್ರೀಕ್ವೆಲ್ ಫಸ್ಟ್ ಲುಕ್ ನವೆಂಬರ್ 27ರ ಮಧ್ಯಾಹ್ನ 12:25ಕ್ಕೆ ಬಿಡುಗಡೆ ಮಾಡಿದ್ದಾರೆ.
Step into the land of the divine 🔥
Presenting #KantaraChapter1 First Look & #Kantara1Teaser in 7 languages❤️🔥
▶️ https://t.co/GFZnkCg4BZ#Kantara1FirstLook #Kantara @shetty_rishab @VKiragandur @hombalefilms @HombaleGroup @AJANEESHB @Banglan16034849 @KantaraFilm
— Hombale Films (@hombalefilms) November 27, 2023
ಕಾಂತಾರ 2 ಜೊತೆಗೆ ಹೊಂಬಾಳೆ ಫಿಲ್ಮ್ಸ್ ”ಸಲಾರ್” ಅನ್ನು ಸಹ ನಿರ್ಮಿಸುತ್ತಿದೆ. ಇದು 2023ರ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು. ಕೆಜಿಎಫ್ ಜನಪ್ರಿಯತೆಯ ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಪ್ರಭಾಸ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಸಲಾರ್ ಡಿಸೆಂಬರ್ 22ರಂದು ಚಿತ್ರಮಂದಿರ ಪ್ರವೇಶಿಸಲಿದೆ. ವಿಜಯ್ ಕಿರಗಂದೂರ್ ಅದ್ಧೂರಿ ವೆಚ್ಚದಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ.