ನಾಳೆಯಿಂದ ಸಿಮ್ ಕಾರ್ಡ್ ಪಡೆಯಲು ಹೊಸ ನಿಯಮ ಜಾರಿ
ನಾಳೆಯಿಂದ ಸಿಮ್ ಕಾರ್ಡ್ ಪಡೆಯಲು ಹೊಸ ನಿಯಮ ಜಾರಿ
ಸಿಮ್ ಕಾರ್ಡ್ ಬಳಸಿ ನಡೆಯುವ ವಂಚನೆಗಳಿಗೆ ಕಡಿವಾಣ ಹಾಕಲು ಸಿಮ್ ಮಾರಾಟ & ಖರೀದಿಗೆ ಕೇಂದ್ರ ಸರ್ಕಾರ ಕೆಲವೊಂದು ನಿರ್ಬಂಧ ವಿಧಿಸಿದ್ದು, ಹೊಸ ನಿಯಮ ನಾಳೆಯಿಂದ ಜಾರಿಯಾಗಲಿದೆ. ಸಿಮ್ ಮಾರಾಟಗಾರರು ಸಮಗ್ರ ಪರಿಶೀಲನೆಗೆ ಒಳಪಡಬೇಕಿದ್ದು ಪೊಲೀಸ್ ಪರಿಶೀಲನೆ ಜವಾಬ್ದಾರಿಯನ್ನು ಆಯಾ ಟೆಲಿಕಾಂ ಸಂಸ್ಥೆಗಳು ನೋಡಿಕೊಳ್ಳಬೇಕು. ಒಂದು ಐಡಿಯಲ್ಲಿ ನೀವು 9 ಸಿಮ್‌ಗಳನ್ನು ಪಡೆಯಬಹುದು. ನಿಯಮಗಳ ಪ್ರಕಾರ, ಒಂದು ಐಡಿಯಲ್ಲಿ 9 ಸಿಮ್‌ಗಳನ್ನು ಸಕ್ರಿಯಗೊಳಿಸಬಹುದು. ಆದರೆ ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಐಡಿಯಲ್ಲಿ ಕೇವಲ 6 ಸಿಮ್‌ಗಳನ್ನು ಸಕ್ರಿಯಗೊಳಿಸಬಹುದು. ಸಿಮ್ ಮಾರಾಟ ಮಾಡಿದ ತಕ್ಷಣ ನೋಂದಣಿ ಮಾಡಿಕೊಳ್ಳಬೇಕಿದ್ದು, ನಿಯಮ ಉಲ್ಲಂಘಿಸಿದರೆ 10ಲಕ್ಷ ರೂ. ದಂಡ ಪಾವತಿಸಬೇಕು. ಅಸ್ತಿತ್ವದಲ್ಲಿರುವ ನಂಬರ್‌ಗೆ ಹೊಸ ಸಿಮ್ ಪಡೆಯುವ ಗ್ರಾಹಕರು ಆಧಾರ್, ಬಯೋಮೆಟ್ರಿಕ್ ಸಲ್ಲಿಸುವುದು ಕಡ್ಡಾಯ.
ಹೊಸ ಸಿಮ್ ಕಾರ್ಡ್ ನಿಯಮಗಳು ಹೀಗಿವೆ
1. ವ್ಯಾಪಾರ ಸಂಪರ್ಕದ ಮೂಲಕ ಮಾತ್ರ ಸಿಮ್ ಕಾರ್ಡ್‌ಗಳನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸಲು ಅನುಮತಿಸಲಾಗಿದೆ. ಸಾಮಾನ್ಯ ಬಳಕೆದಾರರು ಹಿಂದಿನಂತೆ ಈಗಲೂ ಕೂಡ ಒಂದು ಐಡಿಯಲ್ಲಿ 9 ಸಿಮ್ ಕಾರ್ಡ್‌ಗಳನ್ನು ಪಡೆಯಬಹುದು.
2. ಸಿಮ್ ಕಾರ್ಡ್ ಅನ್ನು ಕ್ಲೋಸ್ ಆದ 90 ದಿನಗಳ ಅವಧಿಯ ನಂತರವೇ ಆ ಸಂಖ್ಯೆಯನ್ನು ಇನ್ನೊಬ್ಬ ವ್ಯಕ್ತಿಗೆ ನೀಡಲಾಗುತ್ತದೆ.
3. ಅಸ್ತಿತ್ವದಲ್ಲಿರುವ ತಮ್ಮ ಫೋನ್ ಸಂಖ್ಯೆಗಳಿಗೆ ಸಿಮ್ ಕಾರ್ಡ್‌ಗಳನ್ನು ಖರೀದಿಸುವ ಗ್ರಾಹಕರು ತಮ್ಮ ಆಧಾರ್ ಮತ್ತು ಇತರ ಡೆಮೊಗ್ರಾಫಿಕ್ ಡೇಟಾವನ್ನು ಸಲ್ಲಿಸಬೇಕಾಗುತ್ತದೆ.
4. ರಿಜಿಸ್ಟರ್ ಆಗದ ಡೀಲರ್‌ಗಳ ಮೂಲಕ ಸಿಮ್ ಕಾರ್ಡ್‌ಗಳ ಮಾರಾಟ ಮಾಡಿಸಿದರೆ ಟೆಲಿಕಾಂ ಆಪರೇಟರ್‌ಗಳ ಮೇಲೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.
5. ರಿಜಿಸ್ಟರ್ ಆಗದ ಡೀಲರ್‌ಗಳ ಮೂಲಕ ಪಡೆದ ಸಿಮ್ ಕಾರ್ಡ್ ಹಾಗೂ ಫೋನ್ ನಂಬರ್ಗಳನ್ನು ಮರುಪರಿಶೀಲಿಸಲಾಗುತ್ತದೆ.
7. ಅಸ್ತಿತ್ವದಲ್ಲಿರುವ ಪಾಯಿಂಟ್ ಆಫ್ ಸೇಲ್ (ಪಿಒಎಸ್) ನವೆಂಬರ್ ಅಂತ್ಯದೊಳಗೆ ದಾಖಲೆಗಳನ್ನು ಸಲ್ಲಿಸಬೇಕು ಮತ್ತು ನೋಂದಾಯಿಸಿಕೊಳ್ಳಬೇಕು. ಪಿಒಎಸ್ ಅಥವಾ ಚಿಲ್ಲರೆ ವ್ಯಾಪಾರಿಗಳು ನೋಂದಣಿಗಾಗಿ ಕಾರ್ಪೊರೇಟ್ ಗುರುತಿನ ಸಂಖ್ಯೆ (CIN), ಲಿಮಿಟೆಟ್ ಲಯಾಬಿಲಿಟಿ ಪಾರ್ಟ್ನರ್ಶಿಪ್ ಐಡೆಂಟಿಫಿಕೇಶನ್ ನಂಬರ್ (LLPIN) ಅಥವಾ ವ್ಯಾಪಾರ ಪರವಾನಗಿ, ಆಧಾರ್ ಕಾರ್ಡ್ ಅಥವಾ ಪಾಸ್‌ಪೋರ್ಟ್, ಪಾನ್ ಕಾರ್ಡ್, ಸರಕು ಮತ್ತು ಸೇವಾ ತೆರಿಗೆ (GST) ನೋಂದಣಿ ಪ್ರಮಾಣಪತ್ರ ಇತ್ಯಾದಿಗಳನ್ನು ಒದಗಿಸಬೇಕಾಗುತ್ತದೆ.
8. ಪಿಒಎಸ್ CIN, LLPIN, ಇನ್ಕಾರ್ಪೊರೇಶನ್ ಪ್ರಮಾಣಪತ್ರ, ಪಾನ್ ಮತ್ತು ಜಿಎಸ್ಟಿ ಪ್ರಮಾಣಪತ್ರವಿಲ್ಲದಿದ್ದರೆ, ಅದು ಅಫಿಡವಿಟ್ ಸಲ್ಲಿಸಬೇಕು. ಮತ್ತು ಈ ದಾಖಲೆಗಳನ್ನು ಲಭ್ಯವಾದ ತಕ್ಷಣವೇ ಸಲ್ಲಿಸಬೇಕಾಗುತ್ತದೆ.
9. ಒಂದು ವೇಳೆ ಪಿಒಎಸ್ ನಕಲಿ ದಾಖಲೆಗಳನ್ನು ಸಲ್ಲಿಸಿದರೆ ಟೆಲಿಕಾಂ ಆಪರೇಟರ್‌ಗಳು ಅದರ ಐಡಿ ಅನ್ನು ನಿರ್ಬಂಧಿಸಬೇಕಾಗುತ್ತದೆ ಮತ್ತು ಪಿಒಎಸ್ ನಿಂದ ನೋಂದಾಯಿಸಲ್ಪಟ್ಟ ಎಲ್ಲಾ ಗ್ರಾಹಕರ ಸಿಮ್‌ಗಳನ್ನು ಮರುಪರಿಶೀಲಿಸಬೇಕಾಗುತ್ತದೆ.