• 8 ಸೆಪ್ಟೆಂಬರ್ 2024

2019-2021ರ ನಡುವೆ 35 ಸಾವಿರ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ: ಕೇಂದ್ರ ಸರ್ಕಾರ

 2019-2021ರ ನಡುವೆ 35 ಸಾವಿರ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ: ಕೇಂದ್ರ ಸರ್ಕಾರ
Digiqole Ad

2019-2021ರ ನಡುವೆ 35 ಸಾವಿರ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ: ಕೇಂದ್ರ ಸರ್ಕಾರ

2019 ಮತ್ತು 2021 ರ ನಡುವೆ ದೇಶದಲ್ಲಿ ಒಟ್ಟು 35,950 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಮಂಗಳವಾರ ಸಂಸತ್ತಿಗೆ ತಿಳಿಸಿದೆ.

ದೇಶದಲ್ಲಿ ಸಾಮಾಜಿಕ ತಾರತಮ್ಯದಿಂದ ಆತ್ಮಹತ್ಯೆ ಮಾಡಿಕೊಂಡ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್‌ಟಿ) ವಿದ್ಯಾರ್ಥಿಗಳ ಸಂಖ್ಯೆಗೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಜನತಾದಳ (ಯುನೈಟೆಡ್) ಸದಸ್ಯ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಅಬ್ಬಯ್ಯ ನಾರಾಯಣಸ್ವಾಮಿ ದೇಶದಲ್ಲಿ ಸಾಮಾಜಿಕ ತಾರತಮ್ಯದಿಂದ ಆತ್ಮಹತ್ಯೆ ಮಾಡಿಕೊಂಡ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಸಂಖ್ಯೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ)ದ ಅಂಕಿ ಅಂಶಗಳ ಪ್ರಕಾರ, 2019 ರಲ್ಲಿ 10,335, 2020ರಲ್ಲಿ 12,526 ಮತ್ತು 2021 ರಲ್ಲಿ 13,089 ವಿದ್ಯಾರ್ಥಿಗಳ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ