• 27 ಮಾರ್ಚ್ 2025

ಹಿರಿಯ ನಟಿ ಲೀಲಾವತಿ ವಿಧಿವಶ

 ಹಿರಿಯ ನಟಿ ಲೀಲಾವತಿ ವಿಧಿವಶ
Digiqole Ad

ಹಿರಿಯ ನಟಿ ಲೀಲಾವತಿ ವಿಧಿವಶ

ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಹಿರಿಯ ನಟಿ ಲೀಲಾವತಿ ಅವರು ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದಾರೆ. ಲೀಲಾವತಿ ಅವರು ಕನ್ನಡ ಅಷ್ಟೇ ಅಲ್ಲದೆ ತಮಿಳು, ತೆಲಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೇ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.  87 ವರ್ಷದ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಟ ದರ್ಶನ್, ಅಂಬರೀಶ್, ಗಿರಿಜಾ ಲೋಕೇಶ್ ಸೇರಿದಂತೆ ಅನೇಕರು ಆಗಮಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟ ಮನೆಗೆ ಭೇಟಿ ನೀಡಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದರು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ