• 20 ಮಾರ್ಚ್ 2025

ಬಿಗ್ ಬಾಸ್ ರೂಪೇಶ್ ಶೆಟ್ಟಿ ಈಗ ಖಡಕ್ ಪೋಲಿಸ್ ಆಫೀಸರ್

 ಬಿಗ್ ಬಾಸ್ ರೂಪೇಶ್ ಶೆಟ್ಟಿ ಈಗ ಖಡಕ್ ಪೋಲಿಸ್ ಆಫೀಸರ್
Digiqole Ad

ಬಿಗ್ ಬಾಸ್ ರೂಪೇಶ್ ಶೆಟ್ಟಿ ಈಗ ಖಡಕ್ ಪೋಲಿಸ್ ಆಫೀಸರ್

ಅಧಿಪತ್ರ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ

ಡಿಸೆಂಬರ್‌ 10: ಕಲರ್ಸ್ ಕನ್ನಡದ ಬಿಗ್ ಬಾಸ್ ಸೀಸನ್ 9ರ ವಿಜೇತ ನಟ ರೂಪೇಶ್ ಶೆಟ್ಟಿ ತುಳು ಸಿನಿಮಾ ‘ಸರ್ಕಸ್’ ನ ಯಶಸ್ಸಿನ ನಂತರ ‘ಅಧಿಪತ್ರ’ ಎಂಬ ಕನ್ನಡ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಇದಾಗಿದ್ದು, ರೂಪೇಶ್ ಶೆಟ್ಟಿ ಪೋಲಿಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಶೂಟಿಂಗ್ ಭರದಿಂದ ಸಾಗುತ್ತಿದ್ದು, ರೂಪೇಶ್ ಶೆಟ್ಟಿ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.

ಚಯನ್ ಶೆಟ್ಟಿ ನಿರ್ದೇಶನ ಮಾಡುತ್ತಿರುವ ‘ಅಧಿಪತ್ರ’ ಸಿನಿಮಾದ ಚಿತ್ರೀಕರಣ ಕುಂದಾಪುರದ ಕೆರಾಡಿ ಸುತ್ತಮುತ್ತ ನಡೆಯುತ್ತಿದೆ.’ ‘ಅಧಿಪತ್ರ’ ನೈಜ್ಯ ಘಟನೆ ಆಧಾರಿತ ಥ್ರಿಲ್ಲರ್ ಚಿತ್ರ. ನನಗೆ ಒಳ್ಳೆಯ ಕಥೆ ಮತ್ತು ಪಾತ್ರ ಬಹಳ ಮುಖ್ಯ. ಹಾಗಾಗಿ ಈ ಸಿನಿಮಾ ಒಪ್ಪಿದ್ದೇನೆ. ಈ ಸಿನಿಮಾದ ನಿರೂಪಣೆಯೂ ಹೊಸದಾಗಿದೆ.’ಎಂದು ರೂಪೇಶ್ ಶೆಟ್ಟಿ ಹೇಳಿದ್ದಾರೆ. ಕೆ.ಆರ್. ಸಿನಿ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ನಾಯಾಕಿಯಾಗಿ ಸುದ್ದಿ ವಾಹಿನಿ ನಿರೂಪಕಿ ಜಾಹ್ನವಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಚಿತ್ರದ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ರೂಪೇಶ್ ಶೆಟ್ಟಿ ಪೋಲಿಸ್ ಯೂನಿಫಾರ್ಮ್ ನಲ್ಲಿ ಮಿಂಚಿದ್ದಾರೆ. ನೈಜ್ಯ ಘಟನೆಯಿಂದ ಸ್ಪೂರ್ತಿ ಪಡೆದು ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಕತೆ ಹೆಣೆಯಲಾಗಿದೆ ಎಂದು ನಿರ್ದೇಶಕ ಚಯನ್ ಶೆಟ್ಟಿ ಹೇಳಿರೋದು ಸಿನಿಮಾದ ಬಗ್ಗೆ ಇನ್ನಷ್ಟು ಕುತೂಹಲ ಮೂಡಿಸಿದೆ.

Digiqole Ad

ಶಿವಪ್ರಸಾದ್ ಮಣಿಯೂರು

https://goldfactorynews.com

ಈ ಸುದ್ದಿಗಳನ್ನೂ ಓದಿ