• 21 ಮೇ 2024

ಕಾಣಿಯೂರಿನ ಸೌಮ್ಯ ಪೂಜಾರಿ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ.

 ಕಾಣಿಯೂರಿನ ಸೌಮ್ಯ ಪೂಜಾರಿ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ.
Digiqole Ad

ಕಾಣಿಯೂರಿನ ಸೌಮ್ಯ ಪೂಜಾರಿ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ.

ಪಂಜಾಬ್‌ನ ಲ್ಯಾಮ್ರಿನ್ ಟೆಕ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 70ನೇ ಸೀನಿಯರ್ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿಗಳ ಸುಪುತ್ರಿ ಹಾಗೂ ಪುತ್ತೂರಿನಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ಸಂತೋಷ್ ಕುಮಾರ್ ರವರ ಸಹೋದರಿ. ಇವರು ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾದ್ಯಮ ಶಾಲೆ ಹಾಗೂ ಆಳ್ವಾಸ್ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿನಿಯಾಗಿರುತ್ತಾರೆ.

ಸೌಮ್ಯಾ ರವರು ಪ್ರಸ್ತುತ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಉದ್ಯೋಗಿಯಾಗಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಮಹಿಳಾ ಕಬಡ್ಡಿ ತಂಡದ ಸದಸ್ಯೆಯಾಗಿರುತ್ತಾರೆ.

Digiqole Ad

ಜಯಂತ ಅಬೀರ

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!