ಶ್ಲೋಕ – 12
ಶ್ಲೋಕ – 12
ಇಷ್ಟಾನ್ ಭೋಗಾನ್ ಹಿ ವೋ ದೇವಾ ದಾಸ್ಯಂತೇ ಯಜ್ಞಭಾವಿತಾಃ ।
ತೈರ್ದತ್ತಾನಪ್ರದಾಯೈಭ್ಯೋ ಯೋ ಭುಂಕ್ತೇ ಸ್ತೇನ ಏವ ಸಃ ॥೧೨॥
ಇಷ್ಟಾನ್ ಭೋಗಾನ್ ಹಿ ವಃ ದೇವಾಃ ದಾಸ್ಯಂತೇ ಯಜ್ಞ ಭಾವಿತಾಃ ತೈಃ ದತ್ತಾನ್ ಅಪ್ರದಾಯ ಏಭ್ಯಃ ಯಃ ಭುಂಕ್ತೇ ಸ್ತೇನಃ ಏವ ಸಃ -ಇಂಥ ಯಜ್ಞದಿಂದ ಬಲಗೊಂಡ ದೇವತೆಗಳು ನೀವು ಬಯಸಿದ ಬಯಕೆಗಳನ್ನು ಈಡೇರಿಸುತ್ತಾರೆ. ಅವರು ನೀಡಿದ್ದನ್ನು ಅವರಿಗೆ ನೀಡದೆ ತಿನ್ನುವವನು ಕಳ್ಳನೇ ಸರಿ.
ನಮಗೆ ಏನು ಬೇಕೋ ಅದನ್ನು ಈ ಪ್ರಕೃತಿ ಕೊಡುತ್ತದೆ. ಹಾಗಿರುವಾಗ ಅದನ್ನು ಉಪಯೋಗಿಸುವ ನಮಗೆ ಕೃತಜ್ಞತೆ ಬೇಕು. ಅದನ್ನು ಬಿಟ್ಟು ‘ಇದು ನನ್ನದು’ ಎಂದು ಅಧಿಕಾರ ಅಹಂಕಾರ ತೋರಿದರೆ ಉದ್ಧಾರವಿಲ್ಲ. ಪ್ರಕೃತಿ ಕೊಟ್ಟಿದ್ದನ್ನು ಕೃತಜ್ಞತೆ ಸಲ್ಲಿಸದೆ ಪಡೆದುಕೊಂಡು ‘ಇದು ನನ್ನದು’ ಎನ್ನುವವನು ಕಳ್ಳನೇ ಸರಿ!