ಲೋಕಸಭೆಯಿಂದ 14 ಸಂಸದರು ಅಮಾನತು
ಲೋಕಸಭೆಯಿಂದ 14 ಸಂಸದರು ಅಮಾನತು
ಸಂಸತ್ತಿನಲ್ಲಿ ನಿನ್ನೆ ನಡೆದ ಭದ್ರತಾ ಲೋಪ ಪ್ರಕರಣ ಸಂಬಂಧ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಲೋಕಸಭೆಯಿಂದ ಕಾಂಗ್ರೆಸ್ ಐವರು ಸೇರಿ 14 ಸಂಸದರನ್ನು ಇಂದು ಅಮಾನತುಗೊಳಿಸಲಾಗಿದೆ. ಮತ್ತೊಂದೆಡೆ, ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ಮತ್ತು ಸಭಾಪತಿಯ ನಿರ್ದೇಶನಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಟಿಎಂಸಿ ಸದಸ್ಯ ಡೆರೆಕ್ ಒಬ್ರಿಯಾನ್ ಅವರನ್ನು ಸದನದಿಂದ ಅಮಾನತುಗೊಳಿಸಲಾಗಿದೆ. ಇದರ ನಂತರವೂ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ಮುಂದುವರೆಸಿದರು.
ಲೋಕಸಭೆಯಲ್ಲಿ ನಡೆದ ಭದ್ರತಾ ಲೋಪದ ಹೊಣೆಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಸಂಸದರು ಭಾರಿ ಗದ್ದಲ ನಡೆಸಿದ್ದಾರೆ. ಸದನದಲ್ಲಿ ಅಶಿಸ್ತು ತೋರಿದ ಕಾರಣಕ್ಕೆ ಸ್ಪೀಕರ್ ಒಂ ಬಿರ್ಲಾ 14 ಸಂಸದರನ್ನು ಅಮಾನತು ಮಾಡಿದ್ದರೆ. ಸಂಸದರಾದ ಟಿಎನ್ ಪ್ರತಾಪನ್, ಹಿಬಿ ಇಡನ್, ಎಸ್ ಜ್ಯೋತಿಮಣಿ, ರಮ್ಯಾ ಹರಿದಾಸ್, ಡೀನ್ ಕುರಿಯಾಕೋಸ್, ಬೆನ್ನಿ ಬೆಹನಾನ್, ವಿಕೆ ಶ್ರೀಕಂಠನ್, ಮೊಹಮ್ಮದ್ ಜಾವೇದ್, ಪಿಆರ್ ನಟರಾಜನ್, ಕನ್ನಿಮೊಳಿ ಕರುಣಾನಿಧಿ, ಕೆ ಸುಬ್ರಹ್ಮಮಣ್ಯಂ, ಎಸ್ ಆರ್ ಪ್ರತಿಭನ್, ಎಸ್ ವೆಂಕಟೇಶನ್ ಹಾಗೂ ಮಣಿಕಂ ಠಾಗೋರ್ ಅಮಾನತಾಗಿದ್ದಾರೆ. ಈ 15 ಸಂಸದರನ್ನು ಸಂಪೂರ್ಣ ಚಳಿಗಾಲದ ಅಧಿವೇಶನ ಮುಕ್ತಾಯಗೊಳ್ಳುವವರೆಗೆ ಅಮಾನತುಗೊಳಿಸಲಾಗಿದೆ.