• 8 ಸೆಪ್ಟೆಂಬರ್ 2024

ಸಹಕಾರಿ ಬ್ಯಾಂಕ್‌ ಸಾಲದ ಮೇಲಿನ ಬಡ್ಡಿ ಮನ್ನಾ: CM ಘೋಷಣೆ

 ಸಹಕಾರಿ ಬ್ಯಾಂಕ್‌ ಸಾಲದ ಮೇಲಿನ ಬಡ್ಡಿ ಮನ್ನಾ: CM ಘೋಷಣೆ
Digiqole Ad

ಸಹಕಾರಿ ಬ್ಯಾಂಕ್‌ ಸಾಲದ ಮೇಲಿನ ಬಡ್ಡಿ ಮನ್ನಾ: CM ಘೋಷಣೆ

ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು ನಿಗದಿ ಪಡಿಸಿದ ಸಮಯದೊಳಗೆ ಮರು ಪಾವತಿ ಮಾಡಿದಲ್ಲಿ ಅಂತಹ ಸಾಲಗಳ ಮೇಲಿನ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದೆಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಈ ಘೋಷಣೆ ಮಾಡಿರುವ ಸಿದ್ಧರಾಮಯ್ಯ, ಉತ್ತರ ಕರ್ನಾಟಕದ ರೈತರಿಗೂ ಅನುಕೂಲವಾಗಲೆಂದು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಚಳಿಗಾಲ ಅಧಿವೇಶನದ ಕೊನೆ ದಿನವಾದ ಇಂದು ಅವರು ಮಹತ್ವದ ಈ ಘೋಷಣೆ ಮಾಡಿದ್ದಾರೆ. ಮಧ್ಯಮಾವಧಿ, ದೀರ್ಘಾವಧಿಯ ಸಾಲವನ್ನು ಕಟ್ಟಿದರೆ ಅದರ ಮೇಲಿನ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು. ಆದರೆ, ಇದು ಸರ್ಕಾರದ ಬಡ್ಡಿ ಮನ್ನಾ ಅವಧಿಯೊಳಗೆ ಸಾಲ ಮರುಪಾವತಿ ಮಾಡಿರುವ ರೈತರಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ.

 

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ