• 18 ಅಕ್ಟೋಬರ್ 2024

ಶ್ಲೋಕ – 22

 ಶ್ಲೋಕ – 22
Digiqole Ad

ಶ್ಲೋಕ – 22

ವಾಸಾಂಸಿ ಜೀರ್ಣಾನಿ ಯಥಾ ವಿಹಾಯ ನವಾನಿ ಗೃಹ್ಣಾತಿ ನರೋSಪರಾಣಿ ।

ತಥಾ ಶರೀರಾಣಿ ವಿಹಾಯ ಜೀರ್ಣಾನ್ಯನ್ಯಾನಿ ಸಂಯಾತಿ ನವಾನಿ ದೇಹೀ ॥೨೨॥

ವಾಸಾಂಸಿ ಜೀರ್ಣಾನಿ ಯಥಾ ವಿಹಾಯ ನವಾನಿ ಗೃಹ್ಣಾತಿ ನರೋSಪರಾಣಿ ತಥಾ ಶರೀರಾಣಿ ವಿಹಾಯ ಜೀರ್ಣಾನ್ಯನ್ಯಾನಿ ಸಂಯಾತಿ ನವಾನಿ ದೇಹೀ– ಮನುಷ್ಯ ಹಳೆಯ ಬಟ್ಟೆಬರೆಗಳನ್ನು ಬಿಸುಟು ಬೇರೆ ಹೊಸತಾದುದ್ದನ್ನು ಉಡುತ್ತಾನೆ ಹೇಗೆಯೋ ಹಾಗೇ-ಜೀವ ಒಂದು ದೇಹವನ್ನು ಬಿಟ್ಟು ಬೇರೆ ಹೊಸ ದೇಹವನ್ನು ಪಡೆಯುತ್ತಾನೆ.

 

ನಾವು ಉಟ್ಟ ಬಟ್ಟೆ ಹಳೆಯದಾದಾಗ ಹೇಗೆ ಅದನ್ನು ಬದಲಿಸುತ್ತೆವೋ-ಹಾಗೇ, ಜೀವ ಒಂದು ದೇಹವನ್ನು ಬಿಟ್ಟು ಇನ್ನೊಂದು ದೇಹವನ್ನು ಪಡೆಯುತ್ತದೆ. ಇಲ್ಲಿ ಒಂದು ವಿಶೇಷವೆಂದರೆ ಹೇಗೆ ತಾಯಿ ತನ್ನ ಮಗುವಿಗೆ ತನ್ನಿಚ್ಚೆಯಂತೆ ಬಟ್ಟೆ ಬದಲಿಸುತ್ತಾಳೊ ಹಾಗೆ ಭಗವಂತ ಜೀವದ ದೇಹ ಬದಲಿಸುತ್ತಾನೆ. ಜೀವನಿಗೆ ಸ್ವತಃ ದೇಹ ಬದಲಿಸುವ ಸ್ವಾತಂತ್ರ್ಯ ಇರುವುದಿಲ್ಲ. ಇದಕ್ಕೆ ಒಂದು ಅಪವಾದ ಎಂದರೆ ಆತ್ಮ ಸಾಕ್ಷಾತ್ಕಾರವಾದ ಯೋಗಿಗಳು. ಅವರು ಭಗವಂತನ ಅನುಗ್ರಹದಿಂದ ಸ್ವ-ಇಚ್ಚೆಯಂತೆ ದೇಹ ಬದಲಿಸುವ ಶಕ್ತಿಯನ್ನು ಪಡೆದಿರುತ್ತಾರೆ. [ಈ ಬಗ್ಗೆ ಸ್ವಾಮಿರಾಮ್ ಅವರು ಬರೆದಿರುವ “Living with Himalayan Masters” ಎನ್ನುವ ಪುಸ್ತಕದಲ್ಲಿ ಅನೇಕ ನೈಜ ದೃಷ್ಟಾಂತಗಳನ್ನು ಕಾಣಬಹುದು.] ಇಂತಹ ಮಹಾನ್ ಯೋಗಿಗಳನ್ನು ಬಿಟ್ಟರೆ ಇತರರಿಗೆ ಸ್ವಇಚ್ಛೆಯಂತೆ ದೇಹ ಬದಲಿಸುವ ಸ್ವಾತಂತ್ರ್ಯ ಇಲ್ಲ. ಆದ್ದರಿಂದ ಭೌತಿಕವಾಗಿ ಹುಟ್ಟು-ಸಾವು ಎಂದರೆ ಉಟ್ಟ ಬಟ್ಟೆಯನ್ನು ಕಳಚಿ ಹೊಸ ಬಟ್ಟೆಯನ್ನು ತೊಡಿಸಿದಂತೆ. ಸ್ವರೂಪತಃ ಜೀವಕ್ಕೆ ಎಂದೂ ಹುಟ್ಟು-ಸಾವು ಅನ್ನುವುದಿಲ್ಲ ಹಾಗು ಹೊಸ ಶರೀರದಿಂದ ಅದರ ಮೂಲಸ್ವಭಾವ ಬದಲಾಗುವುದಿಲ್ಲ.

ಹಾಗಾದರೆ ಆತ್ಮವನ್ನು ನಾಶ ಮಾಡಲು ಸಾದ್ಯವೇ ಇಲ್ಲವೋ? ಎಂದೆಂದಿಗೂ ಇಲ್ಲ ಎನ್ನುತ್ತಾನೆ ಕೃಷ್ಣ ಮುಂದಿನ ಶ್ಲೋಕದಲ್ಲಿ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ