• 18 ಅಕ್ಟೋಬರ್ 2024

‘ಕೃಷಿಭಾಗ್ಯ’ ಯೋಜನೆಗೆ ಮರುಚಾಲನೆ 

 ‘ಕೃಷಿಭಾಗ್ಯ’ ಯೋಜನೆಗೆ ಮರುಚಾಲನೆ 
Digiqole Ad

ಕೃಷಿಭಾಗ್ಯ’ ಯೋಜನೆಗೆ ಮರುಚಾಲನೆ 

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರೀಯ ರೈತರ ದಿನದಂದು ಕರ್ನಾಟಕದ ಅನ್ನದಾತನಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕೃಷಿಭಾಗ್ಯ ಯೋಜನೆ ಮರುಜಾರಿ ಸೇರಿದಂತೆ ರೈತರಿಗಾಗಿ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ಮಳೆ ಕೊರತೆಯಾದರೂ ನಾಡಿನ ರೈತರ ಬೆಳೆಗಳಿಗೆ ನೀರಿನ ಅಭಾವ ಎದುರಾಗಬಾರದು ಎಂಬ ಉದ್ದೇಶದಿಂದ 100 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 106 ತಾಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆಯನ್ನು ಮರುಜಾರಿ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಕ್ಷೇತ್ರಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್/ ಪೆಟ್ರೋಲ್ ಪಂಪ್ಸೆಟ್ ಹಾಗೂ ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ ನೀರಾವರಿ ಸೇರಿದಂತೆ ನಾನಾ ಸೌಲಭ್ಯಗಳನ್ನು ನಿಯಮಾನುಸಾರ ನೀಡಲಾಗುವುದು ಎಂದಿದ್ದಾರೆ. ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ದ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಕೃಷಿ ಭಾಗ್ಯ ಯೋಜನೆಯ ಉದ್ದೇಶವಾಗಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ