• 14 ಫೆಬ್ರವರಿ 2025

ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ

 ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ
Digiqole Ad

ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿಯನ್ನು ಆಯ್ಕೆ ಮಾಡಲಾಗಿದೆ. ಕೆಲವು ದಿನಗಳ ಹಿಂದಷ್ಟೇ ಬಿ.ವೈ ವಿಜಯೇಂದ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷರು, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು ಮತ್ತು ಕೆಲವು ಮೋರ್ಚಾಗಳಿಗೆ ನೇಮಕಾತಿಯನ್ನು ಪ್ರಕಟಿಸಿದ್ದರು. ಇದೀಗ ಎರಡನೇ ಹಂತದಲ್ಲಿ ವಿಧಾನ ಸಭೆ ಮತ್ತು ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಶ್ರೀನಿವಾಸ ಪೂಜಾರಿಯನ್ನು ನೇಮಕ ಮಾಡಿದ್ದಾರೆ. ವಿಧಾನಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಮತ್ತು ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್ ನೇಮಕವಾಗಿದ್ದಾರೆ. ಇನ್ನು ವಿಧಾನಸಭೆಯ ಮುಖ್ಯ ಸಚೇತಕರಾಗಿ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ವಿಧಾನಪರಿಷತ್​ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್‌ನ್ನು ನೇಮಿಸಲಾಗಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ