• 8 ಸೆಪ್ಟೆಂಬರ್ 2024

ಗೃಹಲಕ್ಷ್ಮಿ ಯೋಜನೆ ಸಮಸ್ಯೆ ನಿವಾರಣೆಗೆ ಗ್ರಾಮ ಮಟ್ಟದಲ್ಲಿ ನಾಳೆಯಿಂದ ವಿಶೇಷ ಶಿಬಿರ ಆಯೋಜನೆ

 ಗೃಹಲಕ್ಷ್ಮಿ ಯೋಜನೆ ಸಮಸ್ಯೆ ನಿವಾರಣೆಗೆ ಗ್ರಾಮ ಮಟ್ಟದಲ್ಲಿ ನಾಳೆಯಿಂದ ವಿಶೇಷ ಶಿಬಿರ ಆಯೋಜನೆ
Digiqole Ad

ಗೃಹಲಕ್ಷ್ಮಿ ಯೋಜನೆ ಸಮಸ್ಯೆ ನಿವಾರಣೆಗೆ ಗ್ರಾಮ ಮಟ್ಟದಲ್ಲಿ ನಾಳೆಯಿಂದ ವಿಶೇಷ ಶಿಬಿರ ಆಯೋಜನೆ

ಗೃಹಲಕ್ಷ್ಮಿ ಯೋಜನೆಯಲ್ಲಿರೋ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಮುಂದಾಗಿದೆ. ಸಮಸ್ಯೆ ನಿವಾರಣೆಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕ್ಯಾಂಪ್ ಆಯೋಜಿಸಲು ಸರ್ಕಾರ ಆದೇಶ ಹೊರಡಿಸಿದೆ. ಪ್ರತಿ ಗ್ರಾಮ ಪಂಚಾಯತ್‌ನಲ್ಲಿ ನಾಳೆಯಿಂದ ಡಿ. 29ರ ವರೆಗೆ ವಿಶೇಷ ಶಿಬಿರ ಆಯೋಜಿಸಿದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಕ್ಯಾಂಪ್ ಆಯೋಜಿಸುವಂತೆ ಸೂಚನೆ ನೀಡಲಾಗಿದೆ. ಪಿಡಿಒಗಳ ನೇತೃತ್ವದಲ್ಲಿ ಕ್ಯಾಂಪ್‌ ಆಯೋಜನೆಯಾಗಲಿದ್ದು, ಫಲಾನುಭವಿಗಳ ಸಮಸ್ಯೆ ಸರಿಪಡಿಸಲಾಗುತ್ತದೆ. ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್‌ಗಳು, ಅಂಗನವಾಡಿ ಕಾರ್ಯಕರ್ತೆಯರು ಭಾಗಿಯಾಗುವಂತೆ ಸೂಚಿಸಲಾಗಿದೆ. ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ಅಡೆತಡೆಗಳ ನಿವಾರಣೆ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪಿಡಿಒಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ಬೆಳಗ್ಗೆ 9 ರಿಂದ ಸಂಜೆ 5ರ ತನಕ ಗೃಹಲಕ್ಷ್ಮಿಯರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು.

 

 

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ