• 8 ಸೆಪ್ಟೆಂಬರ್ 2024

ಶ್ಲೋಕ

 ಶ್ಲೋಕ
Digiqole Ad

ಶ್ಲೋಕ – 27

ಜಾತಸ್ಯ ಹಿ ಧ್ರುವೋ ಮೃತ್ಯುರ್ಧ್ರುವಂ ಜನ್ಮ ಮೃತಸ್ಯ ಚ ।

ತಸ್ಮಾದಪರಿಹಾರ್ಯೇರ್ಥೇ ನ ತ್ವಂ ಶೋಚಿತುಮರ್ಹಸಿ ॥೨೭॥

ಜಾತಸ್ಯ ಹಿ ಧ್ರುವಃ ಮೃತ್ಯುಃ ಧ್ರುವಂ ಜನ್ಮ ಮೃತಸ್ಯ ಚ ತಸ್ಮಾತ್ ಅಪರಿಹಾರ್ಯೇ ಅರ್ಥೇ ನ ತ್ವಂ ಶೋಚಿತುಮ್ ಅರ್ಹಸಿ– ಹುಟ್ಟಿದವನಿಗೆ ಸಾವು ಖಚಿತ; ಸತ್ತವನಿಗೆ ಮರುಹುಟ್ಟೂ ಖಚಿತ. ಎಂದ ಮೇಲೆ, ಅನಿವಾರ್ಯವಾದ ಸಂಗತಿಗಾಗಿ ನೀನು ಅಳುವುದು ತರವಲ್ಲ.

ಹುಟ್ಟು-ಸಾವು, ಸುಖ-ದುಃಖ, ಒಂದು ನಾಣ್ಯದ ಎರಡು ಮುಖವಿದ್ದಂತೆ. ರಾತ್ರಿ ಇಲ್ಲದೆ ಹಗಲಿಲ್ಲ. ಹುಟ್ಟಿದ ಮೇಲೆ ಸಾವು ಕಟ್ಟಿಟ್ಟ ಬುತ್ತಿ. ನಾವು ಜೀವನದಲ್ಲಿ ಅನಿವಾರ್ಯವಾದದ್ದನ್ನು ಹೊಂದಿಸಿಕೊಳ್ಳುವುದನ್ನು ಕಲಿಯಬೇಕು. ಅದನ್ನು ಬಿಟ್ಟು ಕಷ್ಟ ಬಂದಾಗ ಕೊರಗುವುದು ತರವಲ್ಲ. ಅನಿವಾರ್ಯವಾದ ಕರ್ತವ್ಯ ಪಾಲನೆಯಲ್ಲಿ ನಾವು ಎಂದೂ ದುಃಖಿಸಬಾರದು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ