• 21 ಮೇ 2024

ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

 ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ
Digiqole Ad

ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

ಕರಾವಳಿ ಜಿಲ್ಲೆಯ ಬಹುದಿನದ ಬೇಡಿಕೆಯಾದ ಮಹಾನಗರಗಳನ್ನು ಜೋಡಿಸುವ ಸೆಮಿ ಹೈ ಸ್ಪೀಡ್ ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೆ ಮೋದಿ ಇಂದು ಚಾಲನೆ ನೀಡಿದ್ದಾರೆ. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಮಡಗಾಂವ್ (ಗೋವಾ)ಗೆ ಇಂದು 12.13ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಪ್ರಥಮ ಪ್ರಯಾಣ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಮಂಗಳೂರು- ಮಡಗಾಂವ್ ಸೇರಿ 6 ವಂದೇ ಭಾರತ್ & 2 ಅಮೃತ್‌ ಭಾರತ್‌ ರೈಲುಗಳಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಿದರು. ಮಂಗಳೂರು-ಮಡಗಾಂವ್ ರೈಲು ಬೆಳಗ್ಗೆ 11 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಸಂಜೆ 4.40ಕ್ಕೆ ಮಡಗಾಂವ್ ಗೆ ತಲುಪಲಿದ್ದು, ಮತ್ತೆ ಸಂಜೆ ಮಡಗಾಂವ್ ನಿಂದ 6.10ಕ್ಕೆ ಹೊರಟು ರಾತ್ರಿ 10.45ಕ್ಕೆ ಮಂಗಳೂರು ತಲುಪಲಿದೆ. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶಾಸಕ ಡಾ. ವೈ. ಭಾರತ್ ಶೆಟ್ಟಿ, ಉಪ ಮೇಯರ್ ಸುನೀತ, ಮನಪಾ ಸದಸ್ಯ ವಿನಯ್ ರಾಜ್, ಪಾಲ್ಫಾಟ್ ರೈಲ್ವೆಯ ಡಿಆರ್ಎಂ ಅರುಣ್ ಕುಮಾರ್ ಚತುರ್ವೇದಿ, ಎಡಿಆರ್ ಎಂ ಜಯಕೃಷ್ಣನ್ ಉಪಸ್ಥಿತರಿದ್ದರು.

 

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!