• 8 ಸೆಪ್ಟೆಂಬರ್ 2024

ನಕಲಿ ಲೋಕಾಯುಕ್ತ ಸಿಸಿಬಿ ಬಲೆಗೆ; ಇನ್ಸ್ ಪೆಕ್ಟರ್ ಸೋಗಿನಲ್ಲಿ ಹಣ ವಸೂಲಿ, ಆರೋಪಿ ಅರೆಸ್ಟ್

 ನಕಲಿ ಲೋಕಾಯುಕ್ತ ಸಿಸಿಬಿ ಬಲೆಗೆ; ಇನ್ಸ್ ಪೆಕ್ಟರ್ ಸೋಗಿನಲ್ಲಿ ಹಣ ವಸೂಲಿ, ಆರೋಪಿ ಅರೆಸ್ಟ್
Digiqole Ad

ನಕಲಿ ಲೋಕಾಯುಕ್ತ ಸಿಸಿಬಿ ಬಲೆಗೆ; ಇನ್ಸ್ ಪೆಕ್ಟರ್ ಸೋಗಿನಲ್ಲಿ ಹಣ ವಸೂಲಿ, ಆರೋಪಿ ಅರೆಸ್ಟ್

ಬೆಂಗಳೂರು, ಜ.2: ಲೋಕಾಯುಕ್ತ ಇನ್ಸ್ ಪೆಕ್ಟರ್ ಎಂದು ಹೇಳಿಕೊಂಡು ಸರಕಾರಿ ಅಧಿಕಾರಿಗಳಿಂದಲೇ ಹಣ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯನ್ನು ಕೇಂದ್ರ ಅಪರಾಧ ವಿಭಾಗದ ಪೋಲಿಸರು ಬಂಧಿಸಿದ್ದಾರೆ. ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸ್ ರೆಡ್ಡಿ ಎಂದು ಗುರುತಿಸಲಾಗಿದೆ. ವಂಚನೆಗೊಳಗಿರುವ ಕುರಿತು ಸರಕಾರಿ ಅಧಿಕಾರಿ ರಾಮದಾಸ್ ಅವರು ವಿಧಾನ ಸೌಧ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರಿಂದ ಆರೋಪಿಯನ್ನು ಬಂಧಿಸಲಾಗಿದೆ.

 

‘ಲೋಕಾಯುಕ್ತ ಇನ್ಸ್‌ಪೆಕ್ಟರ್ ಸೋಗಿನಲ್ಲಿ ಅಧಿಕಾರಿಗಳಿಗೆ ಕರೆ ಮಾಡಿ ಅವರಿಂದ ಹಣ ವಸೂಲಿ ಮಾಡುತ್ತಿದ್ದ ವಂಚಕನನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸರಕಾರಿ ಅಧಿಕಾರಿಯಿಂದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಮಾಹಿತಿ ನೀಡಿದ್ದಾರೆ.

 

ಆರೋಪಿಯು ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿಗೆ ಮಾಡಿದ್ದಾನೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಆರೋಪಿಯು ಚಲನಚಿತ್ರದಿಂದ ಸ್ಫೂರ್ತಿ ಪಡೆದ ನಂತರ ಅಧಿಕಾರಿಗಳಿಂದ ಸುಲಿಗೆ ಮಾಡಲು ಪ್ರಾರಂಭಿಸಿದ್ದ ಎನ್ನಲಾಗಿದೆ‌.

 

ಶ್ರೀನಿವಾಸ್ ರೆಡ್ಡಿ ‌ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಸೇರಿದಂತೆ ಹಲವು ಸರಕಾರಿ ಅಧಿಕಾರಿಗಳಿಗೆ ಸುಲಿಗೆ ಕರೆಗಳನ್ನು ಮಾಡಿದ್ದ. ಸುಮಾರು 40 ರಿಂದ 50 ಸರ್ಕಾರಿ ಅಧಿಕಾರಿಗಳಿಗೆ ವಂಚಿಸಿದ್ದಾನೆ. ಆರೋಪಿಯು ಕ್ರಿಮಿನಲ್ ಹಿನ್ನಲೆಯುಳ್ಳವನಾಗಿದ್ದಾನೆ. ಈತ 2007ರ ಹಿಂದಿನ ದರೋಡೆ ಪ್ರಕರಣಗಳಲ್ಲಿ ಶಾಮೀಲಾಗಿದ್ದ. ತೆಲುಗು ಸಿನಿಮಾವೊಂದರಿಂದ ಪ್ರೇರಿತನಾಗಿ ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಲು ಆರಂಭಿಸಿದ್ದ ಎಂದು ಬಿ. ದಯಾನಂದ ಮಾಧ್ಯಮಗಳಿಗೆ ತಿಳಿಸಿದ್ದಾರೆ.

 

10ನೇ ತರಗತಿಯವರೆಗೆ ಓದಿರುವ ಶ್ರೀನಿವಾಸ್ ರೆಡ್ಡಿ, 2007 ರಿಂದ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾಗಿದ್ದಾನೆ. ಈತನ ವಿರುದ್ಧ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ 36 ಪ್ರಕರಣಗಳು ದಾಖಲಾಗಿವೆ

Digiqole Ad

ಶಿವಪ್ರಸಾದ್ ಮಣಿಯೂರು

https://goldfactorynews.com

ಈ ಸುದ್ದಿಗಳನ್ನೂ ಓದಿ