• 22 ನವೆಂಬರ್ 2024

ರಾಜ್ಯದಲ್ಲಿ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ

 ರಾಜ್ಯದಲ್ಲಿ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ
Digiqole Ad

ರಾಜ್ಯದಲ್ಲಿ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ

ಕರ್ನಾಟಕದಲ್ಲಿ ಮತ್ತೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ. ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಒತ್ತಡ ಕಡಿಮೆ ಮಾಡಲು ಸರ್ಕಾರ ಈ ವಿಮಾನ ನಿಲ್ದಾಣ ನಿರ್ಮಿಸಲು ಸಜ್ಜಾಗಿದೆ. ತುಮಕೂರು ಬಳಿ ಈ ವಿಮಾನ ನಿಲ್ದಾಣ ನಿರ್ಮಾಣವಾಗಲಿದ್ದು, ಈಗಾಗಲೇ ಜಾಗ ಗುರುತು ಮಾಡಿದೆ. ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಮಿಷಕ್ಕೊಂದು ವಿಮಾನ ಟೆಕ್ ಆಫ್ & ಲ್ಯಾಡಿಂಗ್ ಆಗುತ್ತಿದೆ. ಹೀಗಾಗಿ ಒತ್ತಡ ತಗ್ಗಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಇದೀಗ ಜಾಗ ಗುರುತಿಸಿ ಕೆಐಡಿಬಿಗೆ ದಾಖಲೆಗಳ ಹಸ್ತಾಂತರ ಮಾಡಲಾಗಿದೆ. ನವದೆಹಲಿ, ಮುಂಬೈ, ಕಲ್ಕತ್ತಾದಂತಹ ಮಹಾನಗರಗಳಲ್ಲಿ ಎರಡು ವಿಮಾನ ನಿಲ್ದಾಣಗಳಿವೆ. ಅದರಂತೆ ರಾಜ್ಯದಲ್ಲೂ ಮತ್ತೊಂದು ಅಂತರರಾಷ್ಟ್ರೀಯ ನಿಲ್ದಾಣ ನಿರ್ಮಾಣದ ಅಗತ್ಯವಿದೆ. ಕೇಂದ್ರ ನಾಗರೀಕ‌ ವಿಮಾನ‌ ಯಾನ ಸಚಿವಾಲಯ ಸೂಚನೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಂಡಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ