• 8 ಸೆಪ್ಟೆಂಬರ್ 2024

ಶ್ಲೋಕ

 ಶ್ಲೋಕ
Digiqole Ad

ಶ್ಲೋಕ – 37

ಹತೋ ವಾ ಪ್ರಾಪ್ಸ್ಯಸಿ ಸ್ವರ್ಗಂ ಜಿತ್ವಾ ವಾ ಭೋಕ್ಷ್ಯಸೇ ಮಹೀಮ್ 

ತಸ್ಮಾದುತ್ತಿಷ್ಠ ಕೌಂತೇಯ ಯುದ್ಧಾಯ ಕೃತನಿಶ್ಚಯಃ ॥೩೭॥

ಹತಃ ವಾ ಪ್ರಾಪ್ಸ್ಯಸಿ ಸ್ವರ್ಗಮ್ ಜಿತ್ವಾ ವಾ ಭೋಕ್ಷ್ಯಸೇ ಮಹೀಮ್ ತಸ್ಮಾತ್ ಉತ್ತಿಷ್ಠ ಕೌಂತೇಯ ಯುದ್ಧಾಯ ಕೃತ ನಿಶ್ಚಯಃ– ಸತ್ತರೆ ಸ್ವರ್ಗ ಸೇರುವೆ. ಗೆದ್ದರೆ ನೆಲವನ್ನಾಳುವೆ. ಆದ್ದರಿಂದ, ಕೌಂತೇಯ, ಹೋರಾಡುವ ತೀರ್ಮಾನ ತಳೆದು ಎದ್ದು ನಿಲ್ಲು.

“ಯುದ್ಧ ಮಾಡುವುದರಿಂದ ನಾವು ಗೆಲ್ಲುತ್ತೇವೆ ಎನ್ನುವುದು ತಿಳಿಯದು. ಧರ್ಮ ಯುದ್ಧದಲ್ಲಿ ಸತ್ತರೂ ಮೋಕ್ಷ, ಗೆದ್ದರೂ ಮೋಕ್ಷ. ಯಾವುದೋ ಸ್ವಾರ್ಥಕ್ಕಾಗಿ ಮಾಡುತ್ತಿರುವ ಯುದ್ಧವಿದಲ್ಲ. ಅನ್ಯಾಯದ ವಿರುದ್ಧ ಹೋರಾಡುವೆ ಎನ್ನುವ ಸಂಕಲ್ಪದಿಂದ ಎದ್ದು ನಿಂತು ಹೋರಾಡು” ಎನ್ನುತ್ತಾನೆ ಕೃಷ್ಣ.

ನಾವು ಮಾಡುವ ಕಾರ್ಯದಲ್ಲಿ ಧರ್ಮದ ಪರಿಜ್ಞಾನ ಮುಖ್ಯ. ಯಾವುದೇ ಸ್ವಾರ್ಥವಿಲ್ಲದೆ, ಧರ್ಮದ ಮಾರ್ಗವನ್ನು ಅನುಸರಿಸುವವನು ಎಂದೂ ಯಾವುದಕ್ಕೂ ಅಂಜುವ ಅಗತ್ಯವಿಲ್ಲ. ಧರ್ಮ ಮಾರ್ಗದಲ್ಲಿ ನಡೆದರೆ ನನಗೇನಾಗುತ್ತದೋ ಎನ್ನುವ ಭಯ ಬೇಡ. ಏಕೆಂದರೆ ಧರ್ಮದ ನಡೆಯಲ್ಲಿ ಪಲಿತಾಂಶ ಯಾವುದೇ ಇರಲಿ, ಅದು ನಮ್ಮನ್ನು ಮೋಕ್ಷಕ್ಕೆ ಕೊಂಡೊಯ್ಯುವ ಸಾಧನವಾಗಿರುತ್ತದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ