ಡಾ. ರೇಣುಕಾಪ್ರಸಾದ್‌ರಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು
ಡಾ. ರೇಣುಕಾಪ್ರಸಾದ್‌ರಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು
ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊ.AS ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ನಿರ್ದೇಶಕ ಡಾ.ರೇಣುಕಾ ಪ್ರಸಾದ್‌ಗೆ ಸುಪ್ರೀಂಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದ್ದು ಅದನ್ನು ಪೂರ್ಣಗೊಳಿಸಿದ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಅವರು ಬಿಡುಗಡೆಯಾಗಲಿದ್ದಾರೆ. ಹೈಕೋರ್ಟ್ ತೀರ್ಪು ಹಿನ್ನಲೆ ಕಳೆದ ಅ.5ರಂದು ಆಕಾಶಭವನ ಶರಣ್ ಹೊರತುಪಡಿಸಿ ಡಾ. ರೇಣುಕಾಪ್ರಸಾದ್ ಮತ್ತು ಇತರ ಆರೋಪಿಗಳ ಬಂಧನವಾಗಿತ್ತು. ಇದೀಗ ಮೂರು ತಿಂಗಳ ಬಳಿಕ ಎಲ್ಲಾ ಬಂಧಿತರಿಗೂ ಜಾಮೀನು ದೊರೆತಿರುವುದಾಗಿ ತಿಳಿದು ಬಂದಿದೆ.