• 8 ಸೆಪ್ಟೆಂಬರ್ 2024

ಬಿಲ್ಕಿಸ್‌ ಬಾನೊ ಪ್ರಕರಣ: ಗುಜರಾತ್‌ ಆದೇಶ ರದ್ದುಗೊಳಿಸಿದ ಸುಪ್ರೀಂ

 ಬಿಲ್ಕಿಸ್‌ ಬಾನೊ ಪ್ರಕರಣ: ಗುಜರಾತ್‌ ಆದೇಶ ರದ್ದುಗೊಳಿಸಿದ ಸುಪ್ರೀಂ
Digiqole Ad

ಬಿಲ್ಕಿಸ್‌ ಬಾನೊ ಪ್ರಕರಣ: ಗುಜರಾತ್‌ ಆದೇಶ ರದ್ದುಗೊಳಿಸಿದ ಸುಪ್ರೀಂ

2002ರಲ್ಲಿ ಗುಜರಾತ್‌ನಲ್ಲಿ ನಡೆದ ಗುಜರಾತ್‌ ಹತ್ಯಾಕಾಂಡದ ವೇಳೆ ಬಿಲ್ಕಿಸ್‌ ಬಾನೊ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಅಪರಾಧಿಗಳನ್ನು ಬಿಡುಗಡೆಗೊಳಿಸಿದ್ದ ಗುಜರಾತ್‌ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಅತ್ಯಾಚಾರ ಎಸಗಿದ 11 ಅಪರಾಧಿಗಳ ಬಿಡುಗಡೆಗೊಳಿಸಿದ್ದ ಗುಜರಾತ್‌ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್‌ ಇಂದು ರದ್ದುಗೊಳಿಸಿದೆ. ಆರೋಪ ಸಾಬೀತಾಗಿ 11 ಅಪರಾಧಿಗಳು 15ಕ್ಕೂ ಹೆಚ್ಚು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದರು. ಗುಜರಾತ್ ಸರ್ಕಾರ ಸನ್ನಡತೆ ಆಧಾರದಲ್ಲಿ ಕೈದಿಗಳ ಬಿಡುಗಡೆಗೆ ಅನುಮತಿ ನೀಡಿತ್ತು. ಸನ್ನಡತೆ ಆಧಾರದ ಮೇಲೆ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರ್ಕಾರದ ಆದೇಶ ಪ್ರಶ್ನಿಸಿ ಬಿಲ್ಕಿಸ್‌ ಬಾನೊ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ತೀರ್ಪು ಕಾಯ್ದಿರಿಸಿತ್ತು.ಗೋಧ್ರಾ ಹತ್ಯಾ ಕಾಂಡ 2002ರ ನಂತರದ ಕೋಮು ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಮೇಲೆ 11 ಅಪರಾಧಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಅಷ್ಟೇ ಅಲ್ಲ, ಬಿಲ್ಕಿಸ್ ಬಾನು ಕುಟುಂಬದ ಸದಸ್ಯರನ್ನು ಕೊಲೆ ಮಾಡಿದ್ದರು. ಹತ್ಯೆಗೀಡಾದವರ ಪೈಕಿ ಬಾನು ಅವರ ಮೂರು ವರ್ಷದ ಮಗಳೂ ಇದ್ದಳು. 2022ರ ಆಗಸ್ಟ್‌ ತಿಂಗಳಲ್ಲಿ ಗುಜರಾತ್ ಸರ್ಕಾರ ಈ ಕೋಮು ದೌರ್ಜನ್ಯದ ಅಪರಾಧಿಗಳನ್ನು’ಸನ್ನಡತೆ’ಯ ಹೆಸರಿನಲ್ಲಿ ಬಿಡುಗಡೆ ಮಾಡಿತ್ತು. ಇದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಮತ್ತು ಅನೇಕರು ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ದಾಖಲಿಸಿದ್ದರು. ‘ಅತ್ಯಾಚಾರದ ಅಪರಾಧಿಗಳಿಗೆ ಕ್ಷಮಾದಾನ ನೀಡುವ ವಿಧಾನದಲ್ಲಿ ಗುಜರಾತ್‌ ಸರ್ಕಾರ ಸಮರ್ಪಕವಾಗಿ ನಿಯಮ ಪಾಲಿಸಿಲ್ಲ. ಬಿಲ್ಕಿಸ್‌ ಬಾನೊ ಸಲ್ಲಿಸಿದ ಅರ್ಜಿಯು ವಿಚಾರಣೆಗೆ ಅರ್ಹವಾಗಿದೆ. ಹಾಗಾಗಿ, ಗುಜರಾತ್‌ ಸರ್ಕಾರದ ಆದೇಶವನ್ನು ರದ್ದುಗೊಳಿಸಲಾಗುತ್ತಿದೆ’ ಎಂದು ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ