ಏಷ್ಯಾ ಬುಕ್ ಆಫ್ ರೆಕಾರ್ಡ್ ಗೆ ಭಾಜನರಾದ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ರಾಶಿ ಕೆ.ಸಿ
ಏಷ್ಯಾ ಬುಕ್ ಆಫ್ ರೆಕಾರ್ಡ್ ಗೆ ಭಾಜನರಾದ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ರಾಶಿ ಕೆ.ಸಿ
ರಾಷ್ಟ್ರ ಗೀತೆಯನ್ನು 1ಗಂಟೆ ,40 ನಿಮಿಷ,26 ಸೆಕೆಂಡ್ ನಲ್ಲಿ ಗರಿಷ್ಠ 116 ಬಾರಿ ನಿರಂತರವಾಗಿ ಹಾಡುವ ಮೂಲಕ ಕಡಬ ತಾಲೂಕು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ರಾಶಿ.ಕೆ.ಸಿ ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆಯನ್ನು ಮಾಡಿರುತ್ತಾರೆ.
ಇವರು ಈ ಹಿಂದೆ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ರೆಕಾರ್ಡ್ಸ್ ಯುನಿವರ್ಸಿಟಿ ಸಾಧನೆಯನ್ನು ಮಾಡಿದ್ದು ಸಂಗೀತ ,ನೃತ್ಯ, ಭಾಷಣ ,ಏಕಪಾತ್ರಾಭಿನಯ, ನಾಟಕ ,ಯೋಗ, ಕಲಿಕೆಯಲ್ಲಿಯೂ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿರುವ ಈಕೆ ಶ್ರೀ ಚಂದ್ರಶೇಖರ ಬರೆಪ್ಪಾಡಿ ಮತ್ತು ವಿದ್ಯಾಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆಯಾಗಿರುವ ಶ್ರೀಮತಿ ಜ್ಞಾನೇಶ್ವರಿ ದಂಪತಿಗಳ ಸುಪುತ್ರಿ.
ಇವರನ್ನು ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ ಎಂ ಬಿ, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಮುಖ್ಯಗುರು ಸರಸ್ವತಿ ಎಂ ಮತ್ತು ಶಿಕ್ಷಕ ಶಿಕ್ಷಕೇತರ ವೃಂದದವರು ಅಭಿನಂದಿಸಿದರು.