ಅಯೋಧ್ಯೆ; ಶ್ರೀ ರಾಮ ದರ್ಶನಕ್ಕಾಗಿ ಹರಿದು ಬಂದ ಜನಸಾಗರ;ಜನದಟ್ಟಣೆ ನಿಯಂತ್ರಿಸಲು ಆಯೋಧ್ಯೆಗೆ ಬಸ್ ಸೇವೆ ತಾತ್ಕಾಲಿಕ ಸ್ಥಗಿತ!
ಅಯೋಧ್ಯೆ; ಶ್ರೀ ರಾಮ ದರ್ಶನಕ್ಕಾಗಿ ಹರಿದು ಬಂದ ಜನಸಾಗರ;ಜನದಟ್ಟಣೆ ನಿಯಂತ್ರಿಸಲು ಆಯೋಧ್ಯೆಗೆ ಬಸ್ ಸೇವೆ ತಾತ್ಕಾಲಿಕ ಸ್ಥಗಿತ!
ಅಯೋಧ್ಯೆ, ಜ.24: ಅಯೋಧ್ಯೆ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯಾದ ಬಳಿಕ ರಾಮ ಮಂದಿರಕ್ಕೆ ಭಕ್ತಸಾಗರವೇ ಹರಿದು ಬರುತ್ತಿದ್ದು, ಜನದಟ್ಟಣೆಯನ್ನು ನಿಯಂತ್ರಿಸಲು ಅಯೋಧ್ಯೆಗೆ ತಾತ್ಕಾಲಿಕವಾಗಿ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಪ್ರಾಣ ಪ್ರತಿಷ್ಠಾಪನಾ ದಿನದಂದೇ 5 ಲಕ್ಷ ಭಕ್ತರು ಅಯೋಧ್ಯೆಗೆ ಭೇಟಿ ನೀಡಿದ್ದಾರೆ. ಇದೀಗ ಭಕ್ತರ ದಟ್ಟಣೆಯನ್ನು ಕಡಿಮೆಗೊಳಿಸಲು ಲಕ್ನೋ ಹಾಗೂ ಅಯೋಧ್ಯೆ ನಡುವೆ ಬಸ್ ಸೇವೆಯನ್ನು ತಾತ್ಕಾಲಿಕ ವಾಗಿ ಸ್ಥಗಿತಗೊಳಿಸಲಾಗಿದೆ.
ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುವ ವರೆಗೆ ಯಾವುದೇ ಬಸ್ಸುಗಳು ಈ ಮಾರ್ಗದಲ್ಲಿ ಓಡಾಡುವುದಿಲ್ಲ ಎಂದು ತಿಳಿಸಲಾಗಿದೆ.
ದೇವಸ್ಥಾನಕ್ಕೆ ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಬರುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ.
ಉತ್ತರ ಪ್ರದೇಶ ಪೊಲೀಸ್, ರಾಪಿಡ್ ಆಕ್ಷನ್ ಫೋರ್ಸ್ (ಆರ್.ಎ.ಎಫ್), ಮತ್ತು ಸಶಸ್ತ್ರ ಸೀಮಾ ಬಲ್ (ಎಸ್.ಎಸ್.ಬಿ)ಯ ಸುಮಾರು 8,000 ಭದ್ರತಾ ಸಿಬ್ಬಂದಿಗಳನ್ನು ದೇವಸ್ಥಾನದಲ್ಲಿ ನಿಯೋಜಿಸಲಾಗಿದೆ.
‘ನಾವು ವೃದ್ಧರು ಮತ್ತು ದಿವ್ಯಾಂಗರಿಗೆ ಎರಡು ವಾರಗಳ ನಂತರ ಅವರ ಭೇಟಿಯನ್ನು ನಿಗದಿಪಡಿಸುವಂತೆ ಮನವಿ ಮಾಡುತ್ತೇವೆ. ದರ್ಶನಕ್ಕಾಗಿ ಆತುರಪಡುವ ಅಗತ್ಯವಿಲ್ಲ ಎಂದು ಜನರ ಬಳಿ ಮನವಿ ಮಾಡುತ್ತಿದ್ದೇನೆ. ಎಲ್ಲರಿಗೂ ರಾಮಲಲ್ಲಾನ ದರ್ಶನ ಭಾಗ್ಯ ಸಿಗಲಿದೆ’ ಅಯೋಧ್ಯೆಯ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.