• 8 ಸೆಪ್ಟೆಂಬರ್ 2024

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಂಘ ಅಧ್ಯಕ್ಷರಾಗಿ ತಾರಾನಾಥ ಕಾಯರ್ಗ, ಉಪಾಧ್ಯಕ್ಷರಾಗಿ ಚೇತನ್ ಕೋಡಿಬೈಲು

 ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಂಘ ಅಧ್ಯಕ್ಷರಾಗಿ ತಾರಾನಾಥ ಕಾಯರ್ಗ, ಉಪಾಧ್ಯಕ್ಷರಾಗಿ ಚೇತನ್ ಕೋಡಿಬೈಲು
Digiqole Ad

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಂಘ ಅಧ್ಯಕ್ಷರಾಗಿ ತಾರಾನಾಥ ಕಾಯರ್ಗ, ಉಪಾಧ್ಯಕ್ಷರಾಗಿ ಚೇತನ್ ಕೋಡಿಬೈಲು

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ನೂತನ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇಂದು ಸಹಕಾರಿ ಸಭಾಂಗಣದಲ್ಲಿ ನಡೆಯಿತು.ಸಂಘದ ಸಭಾಂಗಣದಲ್ಲಿ ನಡೆದ ನೂತನ ನಿರ್ದೇಶಕರುಗಳ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ತಾರಾನಾಥ ಕಾಯರ್ಗ, ಉಪಾಧ್ಯಕ್ಷರಾಗಿ ಚೇತನ್ ಕೋಡಿಬೈಲು ಅವಿರೋಧವಾಗಿ ಆಯ್ಕೆಯಾದರು.ಚುನಾವಣಾಧಿಕಾರಿ ಶೋಭಾ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಸಹಕರಿಸಿದರು.ಸಭೆಯಲ್ಲಿ ನಿರ್ದೇಶಕರಾದ ಉದಯ ರೈ ಮಾದೋಡಿ, ಗಣೇಶ್ ನಿಡ್ವಣ್ಣಾಯ, ಪ್ರಕಾಶ್ ರೈ ಸಾರಕರೆ, ಚೆನ್ನಪ್ಪ ಗೌಡ ನೂಜಿ, ಅಶ್ವಿನ್ ಎಲ್ ಶೆಟ್ಟಿ, ಶಿವಪ್ರಸಾದ್ ಕಳುವಾಜೆ, ತಿಮ್ಮಪ್ಪ ಬನಾರಿ, ಗಂಗಾಧರ ಪೆರಿಯಡ್ಕ, ಸೀತಾಲಕ್ಷ್ಮಿ, ಜ್ಞಾನೇಶ್ವರಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕೇಶವ ಮುಳಿಯ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಸುಬೋಧ್ ಶೆಟ್ಟಿ ಮೇನಾಲ ,ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಸವಣೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭ ಹಾರೈಸಿದರು.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ