• 8 ಸೆಪ್ಟೆಂಬರ್ 2024

ಕಾಸರಗೋಡು ಕೃಷಿಕನಿಗೆ ಒಲಿದು ಬಂತು ಪದ್ಮಶ್ರೀ!

 ಕಾಸರಗೋಡು ಕೃಷಿಕನಿಗೆ ಒಲಿದು ಬಂತು ಪದ್ಮಶ್ರೀ!
Digiqole Ad

ಕಾಸರಗೋಡು ಕೃಷಿಕನಿಗೆ ಒಲಿದು ಬಂತು ಪದ್ಮಶ್ರೀ! ಮರೆಯಾಗುತ್ತಿರುವ 650ಕ್ಕೂ ಹೆಚ್ಚು ದೇಸಿ ಭತ್ತದ ತಳಿಗಳ ಸಂರಕ್ಷಣೆ;ಸತ್ಯನಾರಾಯಣ ಬೆಳೇರಿಗೆ 2024ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ

ಕಾಸರಗೋಡು, ಜ.26: ಅಳಿವಿನಂಚಿನಲ್ಲಿರುವ ಅಪರೂಪದ ಭತ್ತದ ತಳಿಗಳ ಸಂರಕ್ಷಣೆ ಮಾಡುತ್ತಿರುವ ಕಾಸರಗೋಡು ಜಿಲ್ಲೆಯ ಬೆಳ್ಳೂರಿನ ಕೃಷಿಕ ಸತ್ಯನಾರಾಯಣ ಬೆಳೇರಿ ಅವರಿಗೆ 2024 ನೇ ಸಾಲಿನ ಪದ್ಮ ಶ್ರೀ ಪುರಸ್ಕಾರ ಒಲಿದಿದೆ.ಕಳೆದ 12 ವರ್ಷಗಳಿಂದ ಮರೆಯಾಗುತ್ತಿರುವ ದೇಸಿ ಭತ್ತದ ತಳಿಗಳ ಸಂರಕ್ಷಣೆ ಹಾಗೂ ಸಂವರ್ಧನೆಯಲ್ಲಿ ಸತ್ಯನಾರಾಯಣ ಅವರು ತೊಡಗಿಸಿಕೊಂಡಿದ್ದಾರೆ.ಚೇರ್ಕಾಡಿ ರಾಮಚಂದ್ರರಾಯರು ನೀಡಿದ ಒಂದು ಮುಷ್ಟಿಯಷ್ಟು ʻರಾಜಕಯಮೆʻ ಎಂಬ ದೇಸಿ ಭತ್ತದ ತಳಿಯೊಂದಿಗೆ ಆರಂಭವಾದ ಇವರ ಕೆಲಸ ಪ್ರಸ್ತುತ 650ಕ್ಕೂ ಹೆಚ್ಚಿನ ತಳಿಗಳ ಸಂರಕ್ಷಣೆಯವರೆಗೆ ತಲುಪಿದೆ.

ರಾಜಕಯಮೆ, ಗಂಧಸಾಲೆ, ಅತಿಕಾರ, ಸುಗ್ಗಿಕಯಮೆ, ನವರ, ಮೈಸೂರು ರಾಜರು ಬಳಸುತ್ತಿದ್ದ ರಾಜಮುಡಿ ಮತ್ತು ರಾಜಭೋಗ, ಉಪ್ಪು ನೀರಿನಲ್ಲಿಯೂ ಬೆಳೆಯುವ ಕಗ್ಗ, ಬರನಿರೋಧಕ ಪುಟ್ಟ ಭತ್ತ, ಅವಲಕ್ಕಿಗೆ ಬೇಕಾದ ಸ್ವರಬಾ, ಫಿಲಿಪೈನ್ಸ್ ದೇಶದ ಮನಿಲಾ, ಸುಶ್ರುತನ ಕಾಲದ ಕಳಮೆ, ಬುದ್ಧನ ಕಾಲದ ಕಲಾನಾಮಕ್, ನೇರಳೆ ಬಣ್ಣದ ಡಾಂಬಾರ್ ಕಾಳ, ಕಾರ್ ರೆಡ್ ರೈಸ್, ಕಲಾಬತಿ, ನಜರ್ ಬಾತ್ ಅಲ್ಲದೇ ಮಣಿಪುರ, ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಒಡಿಶಾ ಸೇರಿದಂತೆ ಭಾರತದ ಹೆಚ್ಚಿನೆಲ್ಲಾ ಪ್ರದೇಶಗಳ ಭತ್ತದ ತಳಿಗಳ ಸಂಗ್ರಹ ಇವರಲ್ಲಿದೆ.

ಸ್ಥಳೀಯ ಬೀಜ ವೈವಿಧ್ಯವನ್ನು ಸಂರಕ್ಷಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಕೇಂದ್ರ ಕೃಷಿ ಇಲಾಖೆಯು ನೀಡುವ Plant Genome Saviour Farmer Reward ಎಂಬ ರಾಷ್ಟ್ರೀಯ ಪುರಸ್ಕಾರಕ್ಕೆ ಇವರು ಪಾತ್ರರಾಗಿದ್ದಾರೆ. 2022ರ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ‘ವಿಕ ಸೂಪರ್‌ ಸ್ಟಾರ್‌’ ರೈತ ಪುರಸ್ಕಾರವೂ ಲಭಿಸಿತ್ತು.

Digiqole Ad

ಶಿವಪ್ರಸಾದ್ ಮಣಿಯೂರು

https://goldfactorynews.com

ಈ ಸುದ್ದಿಗಳನ್ನೂ ಓದಿ