9 ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ
9 ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ
ಬಿಹಾರದ ಜೆಡಿಯು , ಬಿಜೆಪಿ ನೇತೃತ್ವದ ಮೈತ್ರಿ ಸರಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ಆಯೋಜಿಸಿದ್ದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಪ್ರಮಾಣವಚನ ಬೋಧಿಸಿದರು. 9 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗುವ ಮೂಲಕ ನಿತೀಶ್ ಕುಮಾರ್ ಕೆಲ ದಿನಗಳಿಂದ ನಡೆದಿದ್ದ ರಾಜಕೀಯ ಬೆಳವಣಿಗೆಗಳಿಗೆ ಅಂತ್ಯ ಹಾಡಿದ್ದಾರೆ. ಇದೇ ವೇಳೆ ಬಿಜೆಪಿ ಶಾಸಕ ಸಾಮ್ರಾಟ್ ಚೌಧರಿ ಅವರು ನೂತನ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಜಯ್ ಕುಮಾರ್ ಸಿನ್ಹಾ, ಡಾ. ಪ್ರೇಮ್ ಕುಮಾರ್, ವಿಜಯ್ ಕುಮಾರ್ ಚೌಧರಿ, ವಿಜೇಂದ್ರ ಪ್ರಸಾದ್ ಯಾದವ್, ಶ್ರವಣ್ ಕುಮಾರ್, ಸಂತೋಷ್ ಸುಮನ್ ಮತ್ತು ಸುಮಿತ್ ಕುಮಾರ್ ಸಿಂಗ್ ಅವರು ನೂತನ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿ ಪದಗ್ರಹಣ ಮಾಡಿದ್ದಾರೆ. ರಾಜ್ಯಪಾಲರು ಇಂದು ಇವರೆಲ್ಲರಿಗೂ ಪ್ರಮಾಣವಚನ ಬೋಧಿಸಿದ್ದಾರೆ.