ಕೋಳಿ ಅಂಕಕ್ಕೆ ಅವಕಾಶವಿಲ್ಲ, ಅನುಮತಿಗಾಗಿ ಠಾಣೆಗೆ ಬರಬೇಡಿ: ಎಸ್.ಪಿ ರಿಷ್ಯಂತ್
ಕೋಳಿ ಅಂಕಕ್ಕೆ ಅವಕಾಶವಿಲ್ಲ, ಅನುಮತಿಗಾಗಿ ಠಾಣೆಗೆ ಬರಬೇಡಿ: ಎಸ್.ಪಿ ರಿಷ್ಯಂತ್
ಮಂಗಳೂರು : ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಎಂದು ದ.ಕ. ಎಸ್ ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಹಾಗಾಗಿ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು.
ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅಂತವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.