ಇಂದು ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆ
ಇಂದು ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು 6ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಹೊಸ ಸಂಸತ್ ಭವನದಲ್ಲಿ ಮಂಡನೆಯಾಗಲಿರುವ ಮೊದಲ ಬಜೆಟ್ ಇದಾಗಿದ್ದು, ಬೆಳಗ್ಗೆ 11ಗಂಟೆಗೆ ಆರಂಭವಾಗಲಿದೆ. ಸತತ ಆರನೇ ಬಾರಿ ಬಜೆಟ್ ಮಂಡಿಸಲಿರುವ ಸೀತಾರಾಮನ್ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಮಧ್ಯಂತರ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆಗಳನ್ನು ಪ್ರಕಟಿಸುವುದಿಲ್ಲ ಎಂದು ಮೊದಲೇ ಸರಕಾರ ಹೇಳಿದ್ದು, ಹಳೆಯ ಹಾಗೂ ಹೊಸ ತೆರಿಗೆ ಪದ್ಧತಿಯಡಿ ತೆರಿಗೆದಾರರಿಗೆ ಯಾವುದೇ ವಿನಾಯಿತಿ ಪ್ರಕಟಿಸುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ. ಚುನಾವಣೆಗೆ ಮುಂಚಿನ ಬಜೆಟ್ ಇದಾದ್ದರಿಂದ ಸಾಕಷ್ಟು ಕುತೂಹಲವೂ ಇದೆ. ಆದರೆ, ಚುನಾವಣೆ ಬಳಿಕ ಮತ್ತೆ ಪೂರ್ಣ ಬಜೆಟ್ ಮಂಡನೆ ಆಗುವುದರಿಂದ ಈ ಮಧ್ಯಂತರ ಬಜೆಟ್ಗೆ ಹೆಚ್ಚಿನ ಮಹತ್ವ ಇರುವುದಿಲ್ಲ. ಮಹಿಳೆಯರು, ಕೃಷಿಕರು ಹಾಗೂ ಆರ್ಥಿಕತೆಗೆ ನೆರವಾಗುವ ಹಲವು ಮಹತ್ವದ ಘೋಷಣೆಗಳನ್ನು ಪ್ರಕಟಿಸುವ ಸಾಧ್ಯತೆಯಿದೆ. ಆದಾಯ ತೆರಿಗೆ ವಿಚಾರದಲ್ಲೂಹಲವು ಮಹತ್ವದ ಪ್ರಸ್ತಾಪವನ್ನು ನಿರೀಕ್ಷಿಸಲಾಗಿದೆ.