• 8 ಸೆಪ್ಟೆಂಬರ್ 2024

ಹಳ್ಳಿ ಜನರ ಮನೆ ಬಾಗಿಲಿಗೆ ಬರಲಿದೆ ಗ್ರಾಮ ನ್ಯಾಯಾಲಯ

 ಹಳ್ಳಿ ಜನರ ಮನೆ ಬಾಗಿಲಿಗೆ ಬರಲಿದೆ ಗ್ರಾಮ ನ್ಯಾಯಾಲಯ
Digiqole Ad

ಹಳ್ಳಿ ಜನರ ಮನೆ ಬಾಗಿಲಿಗೆ ಬರಲಿದೆ ಗ್ರಾಮ ನ್ಯಾಯಾಲಯ

ರಾಜ್ಯದಲ್ಲಿ ನ್ಯಾಯದಾನದ ವ್ಯವಸ್ಥೆಯನ್ನು ಉತ್ತಮಗೊಳಿಸಿ ಗ್ರಾಮೀಣ ಜನರ ಮನೆ ಬಾಗಿಲಿಗೆ ನ್ಯಾಯದಾನ ವ್ಯವಸ್ಥೆ ಕೊಂಡೊಯ್ಯುವ ಉಪಕ್ರಮವಾಗಿ ನೂರು ಹೊಸ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ತಿಳಿಸಿದ್ದಾರೆ. ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿಂದು ಭಾಷಣ ಮಾಡಿದ ಅವರು, ರಾಜ್ಯದ ಗ್ರಾಮೀಣ ಜನರ ಮನೆಬಾಗಿಲಿಗೆ ನ್ಯಾಯ ದೊರಕಿಸುವ ಮಹತ್ವಾಕಾಂಕ್ಷೆಯ ಭಾಗವಾಗಿ ಭಾರತ ಸಂವಿಧಾನದ 39ಎ ಅನುಚ್ಛೇಧದ ಅಡಿಯಲ್ಲಿ ಸಮಾನ ನ್ಯಾಯ ಮತ್ತು ಉಚಿತ ಕಾನೂನು ನೆರವಿಗೆ ಸಂಬಂಧಿಸಿದಂತೆ ರಾಜ್ಯವು ಸಮಾನ ಅವಕಾಶದ ಆಧಾರದ ಮೇಲೆ ನ್ಯಾಯ ಲಭಿಸುವಂತೆ ಮಾಡಲಿದೆ ಎಂದರು.

ಕಾನೂನು ವ್ಯವಸ್ಥೆಯ ನಿರ್ವಹಣೆಯನ್ನು ಸುನಿಶ್ಚಿತಗೊಳಿಸಲು ಬಡವರ, ಗ್ರಾಮೀಣ ಜನರ ಮನೆಬಾಗಿಲಿಗೆ ನ್ಯಾಯದಾನ ತಲುಪಿಸಲು ಗ್ರಾಮ ನ್ಯಾಯಾಲಯಗಳು ಆಧಾರವಾಗಲಿವೆ ಎಂದು ಹೇಳಿದರು. ಸಾಂವಿಧಾನಿಕ ಸಂಸ್ಥೆಗಳು ದುರುಪಯೋಗವಾಗದಂತೆ ನಾವೆಲ್ಲರೂ ಸಂಕಲ್ಪ ಮಾಡಬೇಕಿದೆ. ನಮಗೆ ಸಂವಿಧಾನವೇ ರಾಷ್ಟ್ರೀಯ ಧರ್ಮ. ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂಬ ದೃಢವಾದ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು ಎಂದರು.

Digiqole Ad

ಈ ಸುದ್ದಿಗಳನ್ನೂ ಓದಿ