ಕಾಣಿಯೂರು ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವರಾಜ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ
ಕಾಣಿಯೂರು ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವರಾಜ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ
ದಕ್ಷ, ಪ್ರಾಮಾಣಿಕ,ಸರಳ ವ್ಯಕ್ತಿತ್ವದ, ಉತ್ತಮ ನಡೆ ನುಡಿಯ ಗ್ರಾಮದ ಅಭಿವೃದ್ಧಿಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದ ಕಾಣಿಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ದೇವರಾಜ್ ರವರ ಮುಂದಿನ ಜೀವನ ಸುಖಮಯವಾಗಿರಲಿ ಎಂದು ಬ್ಯಾಂಕ್ ಆಫ್ ಬರೋಡ ಕಾಣಿಯೂರು ಶಾಖೆಯ ಶಾಖಾ ಪ್ರಬಂಧಕರಾದ ಅತಿಥ್ ರೈ ಹೇಳಿದರು.ಅವರು ಕಾಣಿಯೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಗೊಂಡ ಎಂ ದೇವರಾಜ್ ಎಂ ರವರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಶ್ವನಾಥ ಕೊಪ್ಪ ಅಧ್ಯಕ್ಷತೆಯನ್ನು ವಹಿಸಿದ್ದರು.ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಶ್ರೀಮತಿ ಗಂಗಮ್ಮ ಗುಜ್ಜರ್ಮೆ,ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು , ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶ್ರೀ ಗಣೇಶ್ ಕೆ ಎಸ್ ಉದನಡ್ಕ, ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ರಘು ಬಿ ಎನ್, ಗ್ರಾಮ
ಪಂಚಾಯತ್ ಸದಸ್ಯರುಗಳು, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರು, ನಿರ್ದೇಶಕರುಗಳು ಪಂಚಾಯತ್ ಸಿಬ್ಬಂದಿಗಳು,ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.