• 22 ನವೆಂಬರ್ 2024

ಸೌಜನ್ಯ ಪ್ರಕರಣ, ಸಿ.ಬಿ.ಐ ಗೆ ನೊಟೀಸ್ ಜಾರಿ!

 ಸೌಜನ್ಯ ಪ್ರಕರಣ, ಸಿ.ಬಿ.ಐ ಗೆ ನೊಟೀಸ್ ಜಾರಿ!
Digiqole Ad

ಸೌಜನ್ಯ ಪ್ರಕರಣ ,ಸಿ.ಬಿ.ಐ ಗೆ ನೊಟೀಸ್ ಜಾರಿ!

ಉಜಿರೆ :ಹದಿಮೂರು ವರ್ಷದ ಹಿಂದೆ ಧರ್ಮಸ್ಥಳದಲ್ಲಿ ಸಂಭವಿಸಿದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿ ಮೃತಳ ತಂದೆ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್‌ ಜಾರಿ ಮಾಡಿದೆ.

ಸೌಜನ್ಯಾ ತಂದೆ ಚಂದಪ್ಪ ಗೌಡ ಸಲ್ಲಿಸಿದ್ದ ತಕರಾರು ಅರ್ಜಿ ನ್ಯಾಯಮೂರ್ತಿ ಕೆ.ನಟರಾಜನ್ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನಂತರ ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್‌ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿತು.

ಸೌಜನ್ಯಾ ತಂದೆ ಚಂದಪ್ಪ ಗೌಡ ಸಲ್ಲಿಸಿದ್ದ ತಕರಾರು ಅರ್ಜಿ ನ್ಯಾಯಮೂರ್ತಿ ಕೆ.ನಟರಾಜನ್ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನಂತರ ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿತು.ಪ್ರಕರಣದಿಂದ ಸಂತೋಷ್‌ ರಾವ್‌ನನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿಯೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರು ಪರ ವಕೀಲರು ಮನವಿ ಮಾಡಿದರು. ಅದನ್ನು ಪರಿಗಣಿಸಿರುವ ನ್ಯಾಯಪೀಠ, ರೋಸ್ಟ‌ರ್ ಪ್ರಕಾರ ಸೂಕ್ತ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ನ್ಯಾಯಪೀಠ ಸೂಚಿಸಿದೆ. ಪ್ರಕರಣದಿಂದ ಖುಲಾಸೆಯಾಗಿರುವ ಸಂತೋಷ್‌ ರಾವ್‌ನನ್ನು ಸಹ ಪ್ರಕರಣದಲ್ಲಿ ಪ್ರತಿವಾದಿ ಮಾಡಲಾಗಿದೆ.

ಅರ್ಜಿದಾರರು, ಪ್ರಾಸಿಕ್ಯೂಷನ್ ಈ ಅಪರಾಧ ಕೃತ್ಯದಲ್ಲಿ ಆರೋಪಿಯ ಪಾತ್ರ ಇರುವುದನ್ನು ಮತ್ತು ಆತನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿದೆ. ತನಿಖೆಯನ್ನು ಸಮರ್ಪಕವಾಗಿ ಮಾಡಿಲ್ಲವೆಂದು ಸ್ಪಷ್ಟವಾಗಿ ಹೇಳಿದೆ. ಇದರಿಂದ ಇಡೀ ತನಿಖೆ ನ್ಯಾಯೋಚಿತವಾಗಿ ನಡೆಸದಿಲ್ಲ ಎಂಬುದು ಸ್ಪಷ್ಟವಾಗಿರುವ ಕಾರಣ ಮರು ತನಿಖೆ ನಡೆಸಲು ಆದೇಶಿಸಬೇಕು ಎಂದು ಕೋರಿದ್ದಾರೆ.(ಕೃಪೆ ನ್ಯೂಸ್ ಕಾರ್ಕಳ)

ಸೌಜನ್ಯ ಪ್ರಕರಣದ ಸಂಪೂರ್ಣ ಮಾಹಿತಿ ಇಲ್ಲಿದೆ: ಕ್ಲಿಕ್ ಮಾಡಿ

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ