• 22 ನವೆಂಬರ್ 2024

ದ್ವಿತೀಯ ಪಿಯುಸಿ ಮತ್ತು ಎಸ್ ಎಲ್ ಸಿ ಪರೀಕ್ಷೆ  ವೇಳಾಪಟ್ಟಿ ಬಿಡುಗಡೆ

 ದ್ವಿತೀಯ ಪಿಯುಸಿ ಮತ್ತು ಎಸ್ ಎಲ್ ಸಿ ಪರೀಕ್ಷೆ  ವೇಳಾಪಟ್ಟಿ ಬಿಡುಗಡೆ
Digiqole Ad

ದ್ವಿತೀಯ ಪಿಯುಸಿ ಮತ್ತು ಎಸ್ ಎಲ್ ಸಿ ಪರೀಕ್ಷೆ  ವೇಳಾಪಟ್ಟಿ ಬಿಡುಗಡೆ

ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 1ರಿಂದ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 25 ರಿಂದ ನಡೆಯಲಿವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಮಧುಬಂಗಾರಪ್ಪ ಅವರು, ದ್ವಿತಿಯ ಪಿಯು ಪರೀಕ್ಷೆ ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ನಡೆಯಲಿವೆ. ಈ ಬಾರಿ ಒಟ್ಟು 6,98,624 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದು 1,124 ಪರೀಕ್ಷಾ ಕೇಂದ್ರಗಳಲ್ಲಿ ಎಕ್ಸಾಂ ಬರೆಯಲಿದ್ದಾರೆ. ಪಿಯುಸಿ ಪರೀಕ್ಷೆ ಮುಗಿದ 2 ದಿನ ಬಿಟ್ಟು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಲಿವೆ. 2024ರ ದ್ವಿತೀಯ ಪಿಯುಸಿಗೆ 6,98,627 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 3,30,644 ಬಾಲಕರು, 3,67,980 ಬಾಲಕಿಯರು ಪರೀಕ್ಷೆಯನ್ನು ಬರೆಯಲಿದ್ದಾರೆ. ರಾಜ್ಯಾದ್ಯಂತ ಪಿಯುಸಿ ಪರೀಕ್ಷೆಯು 1,124 ಕೇಂದ್ರಗಳಲ್ಲಿ ನಡೆಯಲಿದೆ. 2023-24ನೇ ಸಾಲಿನಿಂದ ದ್ವಿತೀಯ ಪಿ.ಯು.ಸಿ. ಪರೀಕ್ಷಾ ಕ್ರಮದಲ್ಲಿ 80+20 patternನ್ನು (80 ಅಂಕಗಳಿಗೆ ಲಿಖಿತ ಪರೀಕ್ಷೆ ಮತ್ತು 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ) ಅಳವಡಿಸಲಾಗಿದೆ.

ಇನ್ನೂ 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ 2500 ಎಸ್‌ಎಸ್‌ಎಲ್‌ಸಿ 6ರವರೆಗೆ ನಡೆಯಲಿದೆ. ಪರೀಕ್ಷೆಗೆ ಒಟ್ಟು 8,96,271 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಅದರಲ್ಲಿ ಬಾಲಕರು 4,58,427 ಹಾಗೂ ಬಾಲಕಿಯರು 4, 37,844 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆಯಲಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 2747 ಪರೀಕ್ಷಾ ಕೇಂದ್ರಗಳನ್ನು ನಿಯೋಜಿಸಲಾಗಿದೆ. ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಿಜಾಬ್ ಅವಕಾಶ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಸಚಿವರು, ಕೋರ್ಟ್ ನಿರ್ದೇಶನದಂತೆ ಡ್ರೆಸ್ ಕೋಡ್ ಪಾಲೋ ಮಾಡಬೇಕಾಗುತ್ತದೆ. ಇನ್ನು ರಾಜ್ಯದ ಮಕ್ಕಳಿಗೆ ಬಂಪರ್ ಆಫರ್ ನೀಡಿದ ಶಾಲಾ ಶಿಕ್ಷಣ ಇಲಾಖೆ ಪೌಷ್ಠಿಕಾಂಶ ಹೆಚ್ಚಿಸುವ ಆಪರ್ ನೀಡಿದ ಶಾಲಾ ಶಿಕ್ಷಣ ಇಲಾಖೆ ಪೌಷ್ಠಿಕಾಂಶ ಹೆಚ್ಚಿಸುವ ಉದ್ದೇಶದಿಂದ 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲಾಗುತ್ತದೆ. ಇದೇ 22ರಿಂದ ಸಿಎಂ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಹೀಗಿದೆ:
01-03-2024: ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ
04-03-2024: ಗಣಿತ, ಶಿಕ್ಷಣಶಾಸ್ತ್ರ
05-03-2024: ರಾಜ್ಯ ಶಾಸ್ತ್ರ ಸಂಖ್ಯಾಶಾಸ್ತ್ರ
06-03-2024: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್ಸ್
07-03-2024: ಇತಿಹಾಸ ಹಾಗೂ ಭೌತಶಾಸ್ತ್ರ
09-03-2024: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,
ಗೃಹ ವಿಜ್ಞಾನ ಪರೀಕ್ಷೆ
11-03-2024: ತರ್ಕಶಾಸ್ತ್ರ ವ್ಯವಹಾರ ಅಧ್ಯಯನ ಪರೀಕ್ಷೆ
13-03-2024: ಇಂಗ್ಲಿಷ್
15-03-2024: ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ ರಸಾಯನ ಶಾಸ್ತ್ರ ಮೂಲಗಣಿತ
16-03-2024: ಅರ್ಥಶಾಸ್ತ್ರ
18-03-2024: ಭೂಗೋಳ ಶಾಸ್ತ್ರ ಜೀವಶಾಸ್ತ್ರ
20-03-2024: ಸಮಾಜಶಾಸ್ತ್ರ ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
21-03-2024: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
22-03-2024: ಹಿಂದಿ ಪರೀಕ್ಷೆ

(ದ್ವಿತೀಯ ಪಿಯುಸಿಯ ಎಲ್ಲಾ ವಿಷಯಗಳ ಪರೀಕ್ಷೆಗಳು
ಬೆಳಗ್ಗೆ 10.15ರಿಂದ 1.30ರವರೆಗೆ ನಡೆಯಲಿವೆ.)
ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ
25-ಮಾರ್ಚ್-2024
ಮೊದಲ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ
27-ಮಾರ್ಚ್-2024
ಸಮಾಜ ವಿಜ್ಞಾನ
30-ಮಾರ್ಚ್-2024
ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
2-ಏಪ್ರಿಲ್-2024
ಗಣಿತ/*ಸಮಾಜಶಾಸ್ತ್ರ
3-ಏಪ್ರಿಲ್-2024
ಎಲೆಕ್ಟ್ರಿಕಲ್ ಇಂಜಿನಿಯರಿಂಗ್ IV ನ ಅಂಶಗಳು, ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಂಶಗಳು -2, ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಂಶಗಳು – IV, ಎಂಜಿನಿಯರಿಂಗ್ ಗ್ರಾಫಿಕ್ಸ್ -2, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಅಂಶಗಳು-IV, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಅಂಶಗಳು, ANSI ‘C’ ನಲ್ಲಿ ಪ್ರೋಗ್ರಾಮಿಂಗ್, ಕಂಪ್ಯೂಟರ್ ವಿಜ್ಞಾನದ ಅಂಶಗಳು, ಅರ್ಥಶಾಸ್ತ್ರದ ಅಂಶಗಳು4-ಏಪ್ರಿಲ್-2024
ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ತುಳು, ಉರ್ದು, ಸಂಸ್ಕೃತ, ಕೊಂಕಣಿ, NSQF ವಿಷಯಗಳು
6-ಏಪ್ರಿಲ್-2024
ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ ಪರೀಕ್ಷೆ ನಡೆಯಲಿದೆ.

Digiqole Ad

ಈ ಸುದ್ದಿಗಳನ್ನೂ ಓದಿ