• 22 ನವೆಂಬರ್ 2024

ವಿಧಾನಮಂಡಲ ಅಧಿವೇಶನ ಒಂದು ದಿನ ವಿಸ್ತರಣೆ: ಸೋಮವಾರವೂ ಕಲಾಪ ನಡೆಸಲು ನಿರ್ಧಾರ

 ವಿಧಾನಮಂಡಲ ಅಧಿವೇಶನ ಒಂದು ದಿನ ವಿಸ್ತರಣೆ: ಸೋಮವಾರವೂ ಕಲಾಪ ನಡೆಸಲು ನಿರ್ಧಾರ
Digiqole Ad

ವಿಧಾನಮಂಡಲ ಅಧಿವೇಶನ ಒಂದು ದಿನ ವಿಸ್ತರಣೆ: ಸೋಮವಾರವೂ ಕಲಾಪ ನಡೆಸಲು ನಿರ್ಧಾರ

ವಿಧಾನಮಂಡಲ ಅಧಿವೇಶನವನ್ನು ಒಂದು ದಿನದ ಕಾಲ ವಿಸ್ತರಣೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಕಾರ್ಯ ಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ಈ ತೀರ್ಮಾನವನ್ನು ಕೈಕೊಳ್ಳಲಾಗಿದೆ.

 ಮಂಗಳವಾರ ರಾಜ್ಯಸಭೆ ಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಸೋಮವಾರವೇ ಅಧಿವೇಶನವನ್ನು ಮುಗಿಸಬೇಕಾಗಿದೆ. ಬಜೆಟ್‌ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಸೋಮವಾರ ಉತ್ತರ ನೀಡಲಿದ್ದಾರೆ. ಬಳಿಕ ಅನಿರ್ದಿಷ್ಟಾವಧಿಗಳ ಕಾಲ ಸದನ ಮುಂದೂಡಲಿದೆ ರಾಜ್ಯಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರು ಸೋಮವಾರವೇ ರೆಸಾರ್ಟ್‌ ಸೇರಲಿದ್ದಾರೆ. ಅಧಿವೇಶನ ಮುಗಿದ ಬಳಿಕ ಅವರು ರೆಸಾರ್ಟ್‌ಗೆ ತೆರಳಲಿದ್ದಾರೆ. ಈ ನಿಟ್ಟಿನಲ್ಲಿ ಬಹುತೇಕ ಮಧ್ಯಾಹ್ನವೇ ಅಧಿವೇಶನ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ.

ಫೆಬ್ರವರಿ 12 ರಂದು ವಿಧಾನಮಂಡಲ ಅಧಿವೇಶನ ಆರಂಭಗೊಂಡಿತ್ತು. ಸಹಜವಾಗಿ ಎರಡು ವಾರಗಳ ಕಾಲ ಅಧಿವೇಶನ ನಡೆಯುತ್ತದೆ. ಆದರೆ ಈ ಬಾರಿ ಮಸೂದೆಗಳು ಹಾಗೂ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ಜೊತೆಗೆ ಬಜೆಟ್‌ ಚರ್ಚೆಯ ಹಿನ್ನೆಲೆಯಲ್ಲಿ ಕಾರ್ಯಕಲಾಪಗಳನ್ನು ಮುಗಿಸಲು ಸಮಯಾವಕಾಶದ ಕೊರತೆ ಎದುರಾಗಿದೆ. ಈ ನಿಟ್ಟಿನಲ್ಲಿ ಒಂದು ದಿನಗಳ ಕಾಲ ಮುಂದೂಡಲು ತೀರ್ಮಾನ ಕೈಗೊಳ್ಳಲಾಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ