• 8 ಸೆಪ್ಟೆಂಬರ್ 2024

ಸಮುದ್ರದ ಮಧ್ಯೆ ನೌಕಾ ಪಡೆಯ ಮೈನವಿರೇಳಿಸುವ ಸಾಮರ್ಥ್ಯ ಪ್ರದರ್ಶನ

 ಸಮುದ್ರದ ಮಧ್ಯೆ ನೌಕಾ ಪಡೆಯ ಮೈನವಿರೇಳಿಸುವ ಸಾಮರ್ಥ್ಯ ಪ್ರದರ್ಶನ
Digiqole Ad

ಸಮುದ್ರದ ಮಧ್ಯೆ ನೌಕಾ ಪಡೆಯ ಮೈನವಿರೇಳಿಸುವ ಸಾಮರ್ಥ್ಯ ಪ್ರದರ್ಶನ

ನವಮಂಗಳೂರು ಬಂದರಿನಿಂದ 40 ನಾಟಿಕಲ್‌ ಮೈಲ್‌ ದೂರದ ಆಳ ಸಮುದ್ರದಲ್ಲಿ ಈ ಅಣಕು ಕಾರ್ಯಾಚರಣೆ ನಡೆಸಲಾಯಿತು. ಸಮುದ್ರದಲ್ಲಿ ತುರ್ತು ಸಂದರ್ಭಗಳಲ್ಲಿ ಯಾವ ರೀತಿ ಕಾರ್ಯಾಚರಿಸಲಾಗುತ್ತಿದೆ ಎಂಬುದನ್ನು ತಟರಕ್ಷಣಾ ಪಡೆ ಸಿಬ್ಬಂದಿ ಪ್ರದರ್ಶಿಸಿದರು.

ಅರಬ್ಬಿ ಸಮುದ್ರದಲ್ಲಿ ಕರಾವಳಿಗೆ ಆಗಮಿಸಿದ ಉಗ್ರರನ್ನು ಭಾರತೀಯ ತಟರಕ್ಷಣಾ ಪಡೆ ಕಾರ್ಯಾಚರಣೆ ನಡೆಸಿ ಸದೆಬಡಿದಿದೆ. ಇದೇ ವೇಳೆ ಸಮುದ್ರಕ್ಕೆ ಬಿದ್ದ ಮೀನುಗಾರರನ್ನು ಏರ್ ಲಿಫ್ಟ್‌ ಮಾಡಿದ್ದಲ್ಲದೆ, ಬೆಂಕಿ ಹತ್ತಿಕೊಂಡ ಬೋಟ್‌ನ್ನೂ ಸಕಾಲಿಕ ಕಾರ್ಯಾಚರಣೆ ಮೂಲಕ ರಕ್ಷಣೆ. ಇದು ನಿಜವಾಗಿ ನಡೆದ ಘಟನೆಯಲ್ಲ, ಭಾರತೀಯ ಕರಾವಳಿ ರಕ್ಷಣಾ ಪಡೆಯ 48ನೇ ಸಂಸ್ಥಾಪನಾ ದಿನದ ಅಂಗವಾಗಿ ಶುಕ್ರವಾರ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಉಪಸ್ಥಿತಿಯಲ್ಲಿ ನಡೆದ ಅಣಕು ಕಾರ್ಯಾಚರಣೆಯ ಸನ್ನಿವೇಶ.

ನವಮಂಗಳೂರು ಬಂದರಿನಿಂದ 40 ನಾಟಿಕಲ್‌ ಮೈಲ್‌ ದೂರದ ಆಳ ಸಮುದ್ರದಲ್ಲಿ ಈ ಅಣಕು ಕಾರ್ಯಾಚರಣೆ ನಡೆಸಲಾಯಿತು. ಸಮುದ್ರದಲ್ಲಿ ತುರ್ತು ಸಂದರ್ಭಗಳಲ್ಲಿ ಯಾವ ರೀತಿ ಕಾರ್ಯಾಚರಿಸಲಾಗುತ್ತಿದೆ ಎಂಬುದನ್ನು ತಟರಕ್ಷಣಾ ಪಡೆ ಸಿಬ್ಬಂದಿ ಪ್ರದರ್ಶಿಸಿದರು.

ತುರ್ತು ಸಂದರ್ಭದಲ್ಲಿ ರಕ್ಷಣಾ ಪಡೆಯ ನೌಕೆಯಿಂದ ಸಣ್ಣ ಬೋಟನ್ನು ಸಮುದ್ರಕ್ಕೆ ಇಳಿಸಿ, ಆ ಬೋಟ್‌ಗಳು ಸಮರೋಪಾದಿಯಲ್ಲಿ ಧಾವಿಸಿ ಸಂತ್ರಸ್ತರ ರಕ್ಷಣೆ ಮಾಡುವ ಕಸರತ್ತು, ಸಮುದ್ರದ ನಡುವೆ ಯಾವುದಾದರೂ ಬೋಟ್‌ ಅವಘಡಕ್ಕೀಡಾಗಿ ಅಗ್ನಿ ಅನಾಹುತ ಸಂಭವಿಸಿದರೆ ರಕ್ಷಣಾ ಪಡೆಯ ನೌಕೆಯಿಂದ ಅಗ್ನಿ ನಂದಿಸುವ ಕಾರ್ಯಾಚರಣೆ ಪ್ರದರ್ಶಿಸಲಾಯಿತು. ಡಾರ್ನಿಯರ್‌ ವಿಮಾನಗಳು ಹಾಗೂ ಎರಡು ಹೆಲಿಕಾಪ್ಟರ್‌ಗಳ ಗಸ್ತು ಕಾರ್ಯಾಚರಣೆಯೂ ನಡೆಯಿತು. ಸುಮಾರು ಮೂರು ಗಂಟೆ ಕಾಲ ನಡೆದ ಕಾರ್ಯಾಚರಣೆಯ ಕೊನೆಗೆ ತಟರಕ್ಷಣಾ ಪಡೆಯ ನೌಕೆಗಳು ರಾಜ್ಯಪಾಲರಿಗೆ ಗೌರವ ಸೆಲ್ಯೂಟ್‌ ನೀಡಿ ನಿರ್ಗಮಿಸಿದವು. ಇದಕ್ಕೂ ಮೊದಲು ಕೋಸ್ಟ್‌ಗಾರ್ಡ್‌ ವಿಕ್ರಂ ನೌಕೆಗೆ ಆಗಮಿಸಿದ ರಾಜ್ಯಪಾಲರಿಗೆ ಗೌರವ ವಂದನೆ ಸಲ್ಲಿಸಲಾಯಿತು.

ಕರ್ನಾಟಕ ಕರಾವಳಿ ರಕ್ಷಣಾ ಪಡೆಯ ಕಮಾಂಡರ್‌ ಪ್ರವೀಣ್‌ ಕುಮಾರ್‌ ಮಿಶ್ರಾ, ಕಮಾಂಡಿಂಗ್‌ ಆಫೀಸರ್‌ ಅಶೋಕ್‌ ಕುಮಾರ್‌ ಭಾಮಾ ಕಾರ್ಯಾಚರಣೆ ನೇತೃತ್ವ ವಹಿಸಿದ್ದರು. ರಕ್ಷಣಾ ಪಡೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮಳೆಗಾಲದ ಸಂದರ್ಭ ಕೋಸ್ಟ್‌ಗಾರ್ಡ್‌ನ ಹಡಗಿನಲ್ಲಿ ಕಾರ್ಯಾಚರಣೆಯಲ್ಲಿರುವುದು ವಿಶೇಷ ಅನುಭವ ನೀಡಿದೆ. ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದೇನೆ. ಕೋಸ್ಟ್‌ಗಾರ್ಡ್‌ನ ಸಿಬ್ಬಂದಿ ಆಗಿರುವುದಕ್ಕೆ ಹೆಮ್ಮೆ ಇದೆ ಎನ್ನುತ್ತಾರೆ ಒಡಿಶಾ ಮೂಲದ ಸಿಬ್ಬಂದಿ.

ಕೋಸ್ಟ್‌ಗಾರ್ಡ್‌ನ ಈ ಅದ್ಭುತ ಸಾಹಸಮಯ ಕವಾಯತು ನೋಡುವ ಮೊದಲ ಅವಕಾಶ ನನ್ನದಾಯಿತು. ದೇಶದ ಕಡಲು ರಕ್ಷಣೆಯಲ್ಲಿ ಕೋಸ್ಟ್‌ಗಾರ್ಡ್‌ ಪಾತ್ರ ಬಹುಮುಖ್ಯವಾಗಿದ್ದು, ನಮ್ಮ ಕೋಸ್ಟ್‌ಗಾರ್ಡ್‌ ನಮ್ಮ ಹೆಮ್ಮೆ ಎಂದು ಪಂಜಾಬ್‌ನ ಅಮಿತ್‌ ಶರ್ಮಾ ತಿಳಿಸಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ