ಬೃಹತ್ ಉದ್ಯೋಗ ಮೇಳ-2024 ಕ್ಕೆ ಚಾಲನೆ ನೀಡಿದ ಸಿಎಂ: ಒಂದು ಲಕ್ಷಕ್ಕೂ ಹೆಚ್ಚು ಮಂದಿಗೆ ಸಿಗಲಿದೆ ಜಾಬ್ಸ್!
ಬೃಹತ್ ಉದ್ಯೋಗ ಮೇಳ-2024 ಕ್ಕೆ ಚಾಲನೆ ನೀಡಿದ ಸಿಎಂ: ಒಂದು ಲಕ್ಷಕ್ಕೂ ಹೆಚ್ಚು ಮಂದಿಗೆ ಸಿಗಲಿದೆ ಜಾಬ್ಸ್!
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ವತಿಯಿಂದ ಇಂದು ಅರಮನೆ ಮೈದಾನ, ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ-2024ರ ಉದ್ಘಾಟನೆ ಹಾಗೂ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳದ ಲಾಂಛನ ಲೋಕಾರ್ಪಣೆ ಮಾಡಿ ಮಾತನಾಡಿದರು.
ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಫೆಬ್ರವರಿ 26 ಮತ್ತು 27 ರಂದು ಆಯೋಜಿಸಿದೆ. ನಿರುದ್ಯೋಗ ಒಂದು ದೊಡ್ಡ ಸಮಸ್ಯೆಯಾಗಿದ್ದು, ಪ್ರತಿ ವರ್ಷ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಲೇ ಇದೆ. 2014-15 ರಲ್ಲಿ ಶೇ.2.1 ರಷ್ಟಿದ್ದ ನಿರುದ್ಯೋಗ ಸಮಸ್ಯೆ ಇಂದು ಶೇ. 8.40ರಷ್ಟು ಹೆಚ್ಚಾಗಿದ್ದು, ಬೃಹದಾಕಾರದ ಸಮಸ್ಯೆ ಹೆಚ್ಚಾಗುತ್ತಿದೆ. ಸರ್ಕಾರ ಇಂದು ಉದ್ಯೋಗ ಸೃಷ್ಟಿ ಮಾಡಿ, ಉದ್ಯೋಗ ಕೊಡದೆ ಇದ್ದರೆ, ಯುವಜನತೆ ಈ ದೇಶದಲ್ಲಿ ನಿರುದ್ಯೋಗಿಗಳಾಗುತ್ತಾರೆ. ದೇಶದ ಸಂಪತ್ತು ಉತ್ಪನ್ನ ಮಾಡುವ ಯುವ ಜನತೆ ನಿರುಪಯುಕ್ತರಾಗುತ್ತಾರೆ ಎಂದರು.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ಉಪಹಾರ ವ್ಯವಸ್ಥೆ ಮತ್ತು ಉದ್ಯೋಗ ಮೇಳ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬೆಂಗಳೂರಿನ ನಿರ್ದಿಷ್ಟ ಬಸ್ ನಿಲ್ದಾಣದ ಪ್ರದೇಶಗಳಿಂದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ನೊಂದಣಿ ಶುಲ್ಕವಿರುವುದಿಲ್ಲ. ಭಾಗವಿಸುವ ಎಲ್ಲರಿಗೂ ಉಪಹಾರದ ವ್ಯವಸ್ಥೆ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧ ಮತ್ತು ಪಂಚಾಶಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕೌಶಲ್ಯಾಭಿವೃಧ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶ್ರೀಮತಿ ಉಮಾಮಹದೇವನ್, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಕನಗವಲ್ಲಿ, ಹಿರಿಯ ಅಧಿಕಾರಿಗಳು ಹಾಗೂ ಉದ್ಯೋಗಾಂಕ್ಷಿಗಳು ಉಪಸ್ಥಿತರಿದ್ದರು.