• 8 ಸೆಪ್ಟೆಂಬರ್ 2024

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗಾಗಿ ಉಪಯುಕ್ತ ಮಾಹಿತಿ* ಮಾರ್ಚ್ 01 ರಿಂದ 22 ರವರೆಗೆ

 ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗಾಗಿ ಉಪಯುಕ್ತ ಮಾಹಿತಿ* ಮಾರ್ಚ್ 01 ರಿಂದ 22 ರವರೆಗೆ
Digiqole Ad

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗಾಗಿ ಉಪಯುಕ್ತ ಮಾಹಿತಿ* ಮಾರ್ಚ್ 01 ರಿಂದ 22 ರವರೆಗೆ

ರಾಜ್ಯಾದ್ಯಂತ ಈ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳ ನಿಮಿತ್ತ ಪರೀಕ್ಷೆಗಳು ನಡೆಯಲಿದೆ. ಈ ಪರೀಕ್ಷೆಗಳನ್ನು ಸುಗಮ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟ‌ರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ 1973 ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಈ ಬಾರಿ 6,98,624 ಮಕ್ಕಳು ದ್ವಿತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಅಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಖಜಾನೆಗಳಿಂದ ಪ್ರಶ್ನೆಪತ್ರಿಕೆ ಸ್ವೀಕರಿಸಿ, ಅವುಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಮುಖ್ಯ ಅಧೀಕ್ಷಕ ನೇಮಿಸಲಾಗುವುದು. ಕೇಂದ್ರದ ಕೊಠಡಿ ಮೇಲ್ವಿಚಾರಕ ಸಿಬ್ಬಂದಿ ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್ ಸೇರಿ ವಿದ್ಯನ್ಮಾನ ಉಪಕರ ಕಡ್ಡಾಯ ನಿಷೇಧಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ಗುರುತಿನ ಚೀಟಿ ಕಡ್ಡಾಯವಾಗಿ ಧರಿಸಬೇಕು

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬೆಂಗಳೂರು ಇವರು 2024ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ರ ವಾರ್ಷಿಕ ಪರೀಕ್ಷೆಗಳನ್ನು ನಡೆಸಲಿದ್ದು, ಮಾರ್ಚ್ 01 ರಿಂದ 22 ರವರೆಗೆ ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 01.30 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ, ಅಕ್ರಮ ನಡೆಯದಂತೆ ಷರತ್ತಿಗೊಳಪಟ್ಟು ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ.

• ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟ‌ರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್‌ ಪೇಜ‌ರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.

• ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ.

• ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ.

• 200 ಮೀಟ‌ರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

· ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ, ಕೆಎಸ್‌ ಆರ್ ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಚಿತ ಬಸ್ಸು ಸೌಲಭ್ಯ

ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಈ ಅವಧಿಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಿಎಂಟಿಸಿ, ಕೆಎಸ್ ಆರ್ ಟಿಸಿಯ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ (ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ).

01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ

04-03-2024 ಸೋಮವಾರ ಗಣಿತ ಪರೀಕ್ಷೆ

05-03-2024 ರಂದು ರಾಜ್ಯ ಶಾಸ್ತ್ರ ಸಂಖ್ಯಾಶಾಸ್ತ್ರ ಪರೀಕ್ಷೆ

06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್‌ ಪರೀಕ್ಷೆ

07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ

09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ ಭೂಗರ್ಭ ಶಾಸ್ತ್ರಗೃಹ ವಿಜ್ಞಾನ ಪರೀಕ್ಷೆ

11-03-2024 ರಂದು ತರ್ಕಶಾಸ್ತ್ರವ್ಯವಹಾರ ಅಧ್ಯಯನ ಪರೀಕ್ಷೆ

13-03-2024 ರಂದು ಇಂಗ್ಲಿಷ್‌ ಪರೀಕ್ಷೆ

15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ ರಸಾಯನ ಶಾಸ್ತ್ರ ಮೂಲಗಣಿತ ಪರೀಕ್ಷೆ

16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ

18-03-2024 ರಂದು ಭೂಗೋಳ ಶಾಸ್ತ್ರ ಜೀವಶಾಸ್ತ್ರ ಪರೀಕ್ಷೆ

20-03-2024 ರಂದು ಸಮಾಜಶಾಸ್ತ್ರ ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ

22-03-2024 ರಂದು ಹಿಂದಿ ಪರೀಕ್ಷೆಯು ನಡೆಯಲಿದೆ

Digiqole Ad

ಈ ಸುದ್ದಿಗಳನ್ನೂ ಓದಿ