• 8 ಸೆಪ್ಟೆಂಬರ್ 2024

ಜಾತಿಗಣತಿ ವರದಿಯಲ್ಲಿ ಜನಸಂಖ್ಯೆ ಬಹಿರಂಗ: ಎಸ್ಸಿ ಫಸ್ಟ್‌, ಕುರುಬ ಜನಾಂಗವೇ ಅತಿ ಹಿಂದುಳಿದ ವರ್ಗ!

 ಜಾತಿಗಣತಿ ವರದಿಯಲ್ಲಿ ಜನಸಂಖ್ಯೆ ಬಹಿರಂಗ: ಎಸ್ಸಿ ಫಸ್ಟ್‌, ಕುರುಬ ಜನಾಂಗವೇ ಅತಿ ಹಿಂದುಳಿದ ವರ್ಗ!
Digiqole Ad

ಜಾತಿಗಣತಿ ವರದಿಯಲ್ಲಿ ಜನಸಂಖ್ಯೆ ಬಹಿರಂಗ: ಎಸ್ಸಿ ಫಸ್ಟ್‌, ಕುರುಬ ಜನಾಂಗವೇ ಅತಿ ಹಿಂದುಳಿದ ವರ್ಗ!

ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೊಳಗೊಂಡ ಜಾತಿ ಗಣತಿ ವರದಿಯನ್ನು  ರಾಜ್ಯ ಸರ್ಕಾರ ಅಧಿಕೃತವಾಗಿ ಸ್ವೀಕಾರ ಮಾಡಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಸಿಎಂ ಸಿದ್ದರಾಮಯ್ಯನವರಿಗೆ ವರದಿ ಹಸ್ತಾಂತರಿಸಿದ್ದು, ಇದೀಗ ವರದಿಯ ಕೆಲವು ಅಂಶಗಳು ಸೋರಿಕೆಯಾಗಿವೆ. ಇದರ ಅನ್ವಯ ಒಟ್ಟು 6 ಕೋಟಿ ಕನ್ನಡಿಗರಲ್ಲಿ ಯಾವ ಜಾತಿ ಹಾಗೂ ಧರ್ಮದವರು ಎಷ್ಟು ಮಂದಿ ಇದ್ದಾರೆ ಎಂಬ ಅಂಕಿ-ಸಂಖ್ಯೆಯೂ ಬಹಿರಂಗವಾಗಿದೆ. ಪ್ರಬಲ ಸಮುದಾಯಗಳಿಗಿಂತ ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ ಜನಸಂಖ್ಯೆಯೇ ಅಧಿಕವಾಗಿದ್ದಾರೆ ಎಂದು ವರದಿ ತಿಳಿಸಿದೆ.

ಒಟ್ಟು 5.98 ಕೋಟಿ ಜನ ಸಮೀಕ್ಷೆಗೆ ಒಳಪಟ್ಟಿದ್ದು, ಅವರಲ್ಲಿ 32 ಲಕ್ಷ ಜನ ಸಮೀಕ್ಷೆಯಿಂದ ಹೊರಗುಳಿದಿದ್ದಾರೆ. ಮೂಲಗಳ ಪ್ರಕಾರ, ರಾಜ್ಯದಲ್ಲಿ ದಲಿತರೇ ಹೆಚ್ಚಾಗಿದ್ದು, ಕುರುಬ ಜನಾಂಗವೇ ಅತಿ ಹಿಂದುಳಿದ ಸಮುದಾಯವಾಗಿದೆ. ರಾಜ್ಯದ ಒಟ್ಟಾರೆ ಜನಸಂಖ್ಯೆ 5.98 ಕೋಟಿ. ಈ ಪೈಕಿ ಅಹಿಂದ ವರ್ಗದವರು 3.96 ಕೋಟಿಯಷ್ಟಿದ್ದಾರೆ. ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣ ಹಾಗೂ ಇತರರ ಸಂಖ್ಯೆ 1.87 ಕೋಟಿಯಷ್ಟಿದೆ.

ಒಟ್ಟು 816 ಇತರ ಹಿಂದುಳಿದ ಜಾತಿಗಳೆಂದು ಗುರುತಿಸಲಾಗಿದೆ. ಒಟ್ಟು 1,351 ಜಾತಿಗಳನ್ನು ಸಮೀಕ್ಷೆಯಡಿ ಪರಿಗಣನೆಗೆ ತೆಗೆದುಕೊಳ್ಳಲಾಗಿದ್ದು, ಹೊಸದಾಗಿ 192 ಜಾತಿಗಳನ್ನು ದಾಖಲಿಸಲಾಗಿದೆ. 10ಕ್ಕಿಂತ ಕಡಿಮೆ ಜನಸಂಖ್ಯೆ ಇರುವ 80 ಜಾತಿಗಳ ಹೆಸರನ್ನು ವರದಿಯಲ್ಲಿ ದಾಖಲಿಸಲಾಗಿದೆ. ಸುಮಾರು 30 ಜಾತಿಗಳು ಅತ್ಯಂತ ಹಿಂದುಳಿದ ಜಾತಿ ವರ್ಗದಡಿ ಸೇರಲಿವೆ.

Digiqole Ad

ಈ ಸುದ್ದಿಗಳನ್ನೂ ಓದಿ