ಕಾಪು: ಮೀನಿನ ಬಲೆಗೆ ಸಿಲುಕಿ ವ್ಯಕ್ತಿ ಸಾವು.!
ಕಾಪು: ಮೀನಿನ ಬಲೆಗೆ ಸಿಲುಕಿ ವ್ಯಕ್ತಿ ಸಾವು.!
ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೋರ್ವರು ಮೀನಿನ ಬಲೆಗೆ ಸಿಕ್ಕಿಕೊಂಡು ಸಾವನ್ನಪಿರುವ ಘಟನೆ ನಡೆದಿದೆ.ಕಿಶೋರ್ ಎಂಬವರು ಮುಂಜಾನೆ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳಿದ್ದು ಮೀನುಗಾರಿಕಾ ಬಲೆಗೆ ಸಿಲುಕಿ ಮೃತಪಟ್ಟಿದ್ದಾರೆ. ಪ್ರತಿ ದಿನ ಅವರು ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಸಮುದ್ರದಲ್ಲಿ ತೇಲುತ್ತಿದ್ದ ಕಿಶೋರ್ ಅವರನ್ನು ಗಮನಿಸಿದ ಮತ್ತೊಂದು ಬೋಟಿನವರು ಮೃತದೇಹವನ್ನು ಮೇಲಕ್ಕೆ ತೆಗೆದು ತಂದಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.