ಬಂಟ್ವಾಳ: ಅಕ್ರಮ ಮರಳುಗಾರಿಕಾ ಅಡ್ಡೆಗೆ ಗಣಿ ಇಲಾಖೆಯಿಂದ ದಾಳಿ, ಸೊತ್ತು ವಶ.!
ಬಂಟ್ವಾಳ: ಅಕ್ರಮ ಮರಳುಗಾರಿಕಾ ಅಡ್ಡೆಗೆಗಣಿ ಇಲಾಖೆಯಿಂದ ದಾಳಿ, ಸೊತ್ತುವಶ
ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಪಾದಿಲ-ಪೆರಾಳ ಎಂಬಲ್ಲಿ ಗುರುವಾರ ನೇತ್ರಾವತಿ ನದಿ ಬದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕಾ ಜಾಗಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖಾಧಿಕಾರಿಗಳು ದಾಳಿ ನಡೆಸಿದಾಗ ಸ್ಥಳದಲ್ಲಿದ್ದ ಕಾರ್ಮಿಕರು ಪರಾರಿಯಾಗಿದ್ದು, ಕೃತ್ಯಕ್ಕೆ ಬಳಸಿದ ದೋಣಿ, ದೋಣಿಯ ಚಾಲನೆಗೆ ಬಳಸುವ ಮೋಟಾರು, ಗ್ಯಾಸ್ ಸಿಲಿಂಡರ್ ಸಹಿತ ಸ್ಥಳದಲ್ಲಿದ್ದ ಸೊತ್ತುಗಳನ್ನು ಹಾಗೂ ಸುಮಾರು 25 ಎಂ ಟಿ ಮರಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.