ಉಡುಪಿ: ಅಪರಿಚತರಿಂದ ಗುಂಡು ಹಾರಿಸಿ ಯುವಕನ ಹತ್ಯೆ..!
ಉಡುಪಿ: ಅಪರಿಚತರಿಂದ ಗುಂಡು ಹಾರಿಸಿ ಯುವಕನ ಹತ್ಯೆ..!
ಉಡುಪಿ: ಯುವಕನೊಬ್ಬನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದ ಘಟನೆ ಬ್ರಹ್ಮಾವರ ಸಮೀಪದ ಬಾರ್ಕೂರಿನಿ ಹನೆಹಳ್ಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ. ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದು ಶನಿವಾರ ರಾತ್ರಿ ಮನೆಗೆ ಬಂದಿದ್ದರು. ಮನೆಯಲ್ಲಿ ಏಕಾಂಗಿಯಾಗಿ ಊಟ ಮಾಡುತ್ತಿರುವಾಗ ದುಷ್ಕರ್ಮಿಗಳು ಆಗಮಿಸಿ ಶೂಟೌಟ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.ನಿನ್ನೆ ರಾತ್ರಿ 9.30 ರ ವೇಳೆಗೆ ಗುಂಡಿನ ಶಬ್ದ ಕೇಳಿ ಬಂದಿದ್ದು, ಪಟಾಕಿಯ ಶಬ್ದ ಎಂದು ಭಾವಿಸಿ ಪಕ್ಕದ ಮನೆಯವರು ಸುಮ್ಮನಾಗಿದ್ದರು ಎನ್ನಲಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.