• 8 ಸೆಪ್ಟೆಂಬರ್ 2024

ಮಂಗಳೂರು: ನಿರ್ಮಾಣ ಹಂತದಲ್ಲಿದ್ದ ಪ್ರಸಿದ್ಧ ದೈವಸ್ಥಾನದ ಕಟ್ಟಡ ದ್ವಂಸ.!

 ಮಂಗಳೂರು: ನಿರ್ಮಾಣ ಹಂತದಲ್ಲಿದ್ದ ಪ್ರಸಿದ್ಧ ದೈವಸ್ಥಾನದ ಕಟ್ಟಡ ದ್ವಂಸ.!
Digiqole Ad

ಮಂಗಳೂರು: ನಿರ್ಮಾಣ ಹಂತದಲ್ಲಿದ್ದ ಪ್ರಸಿದ್ಧ ದೈವಸ್ಥಾನದ ಕಟ್ಟಡ ದ್ವಂಸ.!

ದ.ಕ ಜಿಲ್ಲೆಯ ಉಳ್ಳಾಲ ತಾಲೂಕಿನ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ ದೈವಸ್ಥಾನಕ್ಕೆ ನೂತನವಾಗಿ ನಿರ್ಮಿಸುತ್ತಿದ್ದ ನೂತನ ಭಂಡಾರದಮನೆಯನ್ನು ಜೆಸಿಬಿ ಮೂಲಕ ರಾತ್ರೋರಾತ್ರಿ ಕಿಡಿಗೇಡಿಗಳು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಸ್ಥಳಕ್ಕೆ ತಹಶೀಲ್ದಾ‌ರ್ ಪುಟ್ಟರಾಜು, ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಆನಂದ್‌, ಎಸಿಪಿ ಧನ್ಯಾ ನಾಯಕ್‌ ಭೇಟಿ ನೀಡಿದ್ದಾರೆ. ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಸೇರುವ ಕೊಂಡಾಣ ದೈವಸ್ಥಾನ., ಸದ್ಯ ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಭಂಡಾರಮನೆ ಖಾಸಗಿ ಗುತ್ತಿನ ಮನೆ ಒಡೆತನದಲ್ಲಿತ್ತು. ಕ್ಷೇತ್ರದಲ್ಲಿ ಹದಿನೈದು ಕೋಟಿಗೂ ಮಿಕ್ಕಿ ಬೆಲೆಬಾಳುವ ದೈವಗಳ ಒಡವೆಗಳಿವೆ ಎಂದು ಅಂದಾಜಿಸಲಾಗಿದೆ. ಆದರೆ ಭಂಡಾರಮನೆಯನ್ನು ಮುಜರಾಯಿ ಇಲಾಖೆಗೆ ಸೇರಿಸಲು ಹಲವರಿಂದ ಯತ್ನ ನಡೆದಿತ್ತು. ಆದರೆ ಖಾಸಗಿ ಭಂಡಾರ ಮನೆಯವರು ಸಮ್ಮತಿ ನೀಡಿರಲಿಲ್ಲ. ಆ ಹಿನ್ನಲೆ ಕ್ಷೇತ್ರದ ದೈವಗಳಿಗೆ ಬೇರೆಯೇ ಭಂಡಾರಮನೆ ನಿರ್ಮಾಣಕ್ಕೆ ವ್ಯವಸ್ಥಾಪನಾ ಸಮಿತಿ ಮುಂದಾಗಿತ್ತು. ದೈವಸ್ಥಾನದ ಪಕ್ಕದ ಜಾಗದಲ್ಲಿ ಕಳೆದ ಜನವರಿ 8 ರಂದು ನೂತನ ಭಂಡಾರ ಮನೆ ಶಿಲನ್ಯಾಸ ಮಾಡಲಾಗಿತ್ತು. ದಾನಿಗಳ ದೇಣಿಗೆಯಿಂದ ಎಂಭತ್ತು ಶೇಕಡಾ ಕಾಮಗಾರಿ ಪೂರ್ಣಗೊಂಡಿತ್ತು. ಸಮಿತಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಅಧ್ಯಕ್ಷ ಸ್ಥಾನದಿಂದ ಇಳಿಯುತ್ತಿದ್ದಂತೆ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದಾರೆ ಎಂದು ಶಂಕಿಸಲಾಗಿದೆ. ನೂರಾರು ವರ್ಷಗಳಿಂದ ಮುತ್ತಣ್ಣ ಶೆಟ್ಟಿ ಕುಟುಂಬಸ್ಥರ ಸುಪರ್ದಿಯಲ್ಲೇ ಒಡವೆಗಳಿವೆ. ದೈವಗಳ ನೇಮೋತ್ಸವದ ದಿನ ದೈವ ಸ್ಥಾನಕ್ಕೆ ತಂದು ನೇಮೋತ್ಸವ ನಡೆಸಲಾಗುತ್ತದೆ. ಆದರೆ ಇದೀಗ ಬಣ ಗುದ್ದಾಟಕ್ಕೆ ದೈವಸ್ಥಾನದಲ್ಲಿ ವಿವಾದ ಎದ್ದಿದೆ. ಭಾರೀ ಸಂಖ್ಯೆಯಲ್ಲಿ ದೈವಸ್ಥಾನದ ಭಕ್ತರು ಜಮಾವಣೆಗೊಂಡಿದ್ದು, ಈ ಹಿನ್ನೆಲೆ ಪೊಲೀಸ್‌ ಭದ್ರತೆ ಬಿಗಿಗೊಳಿಸಲಾಗಿದೆ. ದೈವಗಳ ಸಮ್ಮುಖದಲ್ಲಿ ಬಗೆ ಹರಿಯಬೇಕಾದ ವಿವಾದ ಪೊಲೀಸ್‌ ಠಾಣೆ ಮೆಟ್ಟಿಲೇರುವಂತಾಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ