• 5 ಡಿಸೆಂಬರ್ 2024

ದಕ್ಷಿಣ ಕನ್ನಡದ 39 ಗ್ರಾಮಗಳಲ್ಲಿ ನೀರಿಗೆ ಬರ ಬೇಗ ಮಳೆ ಬಾರದಿದ್ದಲ್ಲಿ ಪರಿಸ್ಥಿತಿ ಭೀಕರ

 ದಕ್ಷಿಣ ಕನ್ನಡದ 39 ಗ್ರಾಮಗಳಲ್ಲಿ ನೀರಿಗೆ ಬರ ಬೇಗ ಮಳೆ ಬಾರದಿದ್ದಲ್ಲಿ ಪರಿಸ್ಥಿತಿ ಭೀಕರ
Digiqole Ad

ದಕ್ಷಿಣ ಕನ್ನಡದ 39 ಗ್ರಾಮಗಳಲ್ಲಿ ನೀರಿಗೆ ಬರ ಬೇಗ ಮಳೆ ಬಾರದಿದ್ದಲ್ಲಿ ಪರಿಸ್ಥಿತಿ ಭೀಕರ

ಒಂದು ಕಾಲದಲ್ಲಿ ನೀರಿನ ಸಮಸ್ಯೆ ಎಂದರೆ ಏನೆಂದು ಕೇಳರಿಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲೂ ಇತ್ತೀಚಿನ ವರ್ಷಗಳಲ್ಲಿ ಜಲಕ್ಷಾಮ ಕಾಣಿಸಿಕೊಳ್ಳುತ್ತಿದೆ. ನದಿಗಳು ಬೇಸಿಗೆಗೆ ಮುನ್ನವೇ ಬತ್ತುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ಅಂಕಿಅಂಶಗಳ ಪ್ರಕಾರ 39 ಗ್ರಾಮಗಳಲ್ಲಿ ಈ ಬಾರಿ ನೀರಿನ ಸಮಸ್ಯೆ ಕಾಡುವ ಸಾಧ್ಯತೆ ಇದೆ. ಬೇಸಿಗೆ ಮಳೆ ಅಥವಾ ಮುಂಗಾರು ಮಳೆ ಬೇಗನೇ ಸುರಿದಲ್ಲಿ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಬಹುದು. ಇಲ್ಲವಾದಲ್ಲಿ ಪರಿಸ್ಥಿತಿ ಕಷ್ಟಕರವಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳ 39 ಗ್ರಾಮಗಳಲ್ಲಿ ಈ ಬಾರಿ ನೀರಿನ ಸಮಸ್ಯೆ ಕಾಡುವ ಸಾಧ್ಯತೆ ಹೆಚ್ಚಿದೆ. ಅದರಲ್ಲೂ ಬಂಟ್ವಾಳ ಹಾಗೂ ಉಳ್ಳಾಲ ಭಾಗದಲ್ಲಿ ನೀರಿನ ಸಮಸ್ಯೆ ಹೆಚ್ಚು ಇರಲಿದೆ ಎನ್ನುವ ವರದಿಯನ್ನು ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಿದ್ಧಪಡಿಸಿದೆ.

ಮಾರ್ಚ್ ತಿಂಗಳ ಕೊನೆ ಸೇರಿದಂತೆ ಏಪ್ರಿಲ್‌, ಮೇ ತಿಂಗಳಲ್ಲಿ ಈ ಸಮಸ್ಯೆ ಭೀಕರವಾಗುವ ಸಾಧ್ಯತೆಗಳಿದ್ದು, ಬೇಗನೆ ಬೇಸಿಗೆ ಮಳೆ ಅಥವಾ ಮಾನ್ಸೂನ್‌ ಮಳೆ ಬಂದಲ್ಲಿ ಈ ಸಮಸ್ಯೆ ನಿವಾರಣೆಯಾಗಬಹುದು ಎಂದು ಪ್ರಾಧಿಕಾರ ತಿಳಿಸಿದೆ. ಟ್ಯಾಂಕರ್‌ಗಳಿಗೆ ಟೆಂಡರ್‌ ಮಂಗಳೂರು, ಮೂಡುಬಿದಿರೆ ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು ಎಂದು ಘೋಷಿಸಲಾಗಿದೆ. ಬಳಿಕ ಆಗಾಗ ಕಾಣಿಸಿಕೊಂಡ ಮಳೆಯಿಂದಾಗಿ ನೀರಿನ ಸಮಸ್ಯೆ ಕೊಂಚ ಮಟ್ಟಿಗೆ ಕಡಿಮೆಯಾಗಿದೆ. ಆದರೂ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ತಲೆದೋರಬಹುದೆಂಬ ನಿಟ್ಟಿನಲ್ಲಿ ಜಿಲ್ಲಾಡಳಿತ ಪೂರ್ಣ ಸಿದ್ಧತೆ ಮಾಡುತ್ತಿದೆ.ಜಿಲ್ಲೆಯ 39 ಗ್ರಾಮಗಳು ಹಾಗೂ ನಗರ, ಪಟ್ಟಣ ಪ್ರದೇಶಗಳ 112 ವಾರ್ಡ್‌ಗಳನ್ನು ಈಗಾಗಲೇ ಗುರುತಿಸಿಕೊಂಡಿರುವ ಜಿಲ್ಲಾಡಳಿತ, ಸಮಸ್ಯೆ ಬಂದಾಗ ಅಲ್ಲಿಗೆ ನೀರು ಪೂರೈಸಲು ಈಗಾಗಲೇ

ಟ್ಯಾಂಕರ್‌ಗಳಿಗೆ ಟೆಂಡರ್‌ ಪ್ರಕ್ರಿಯೆ ಕೈಗೊಂಡಿದೆ. ಖಾಸಗಿ ಬೋರ್‌ವೆಲ್‌ಗಳ ಮಾಲೀಕರ ಜತೆಗೂ ಕರಾರುಪತ್ರ ಮಾಡಿಸಿಕೊಳ್ಳಲಾಗಿದೆ. ನೀರಿನ ಕೊರತೆಯ ಜತೆಗೆ ಜಾನುವಾರುಗಳಿಗೆ ಮೇವಿನ ಕೊರತೆ ಬಾರದಂತೆ ಗೋಶಾಲೆಗಳ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕುಡಿಯುವ ನೀರಿನ ಲಭ್ಯತೆ ಹಾಗೂ ಸಮಸ್ಯಾತ್ಮಕ ಏರಿಯಾಗಳು ಹಾಗೂ ಗ್ರಾಮಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ ನೀರು ಪೂರೈಕೆಗೆ ಪರ್ಯಾಯ ಮೂಲಗಳನ್ನು ಗುರುತಿಸುವ ಕೆಲಸ ನಡೆದಿದೆ. ಸಮಸ್ಯೆಗಳಿಗೆ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

24 ಗಂಟೆ ಕೆಲಸ ಮಾಡುವ ಟೋಲ್‌ ಫ್ರೀ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿವಿಪತ್ತು ನಿರ್ವಹಣಾ ಪ್ರಾಧಿಕಾರದ ಟೋಲ್‌ ಫ್ರೀ ಸಂಖ್ಯೆ 1077 ದಿನದ 24 ಗಂಟೆಯೂ ಕೆಲಸ ಮಾಡುತ್ತದೆ. ಇದಕ್ಕೆ ಮೂರು ಪಾಳಿಯಲ್ಲಿದುಡಿಯುವ ಸಿಬ್ಬಂದಿ ನೇಮಿಸಲಾಗಿದೆ. ತಾಲೂಕು ಮಟ್ಟದಲ್ಲಿ ತಹಸೀಲ್ದಾರ್‌, ತಾಲೂಕು ಕಾರ‍್ಯನಿರ್ವಹಣಾಧಿಕಾರಿ, ಗ್ರಾಮ ಪಂಚಾಯಿತಿ ಪಿಡಿಒಗಳನ್ನು ಸಂಪರ್ಕಿಸಬಹುದು. ಇವರು ಸ್ಪಂದಿಸದಿದ್ದರೆ ನೇರವಾಗಿ ಜಿಲ್ಲಾಧಿಕಾರಿ (0824-2220588) ಅವರನ್ನು ಸಂಪರ್ಕಿಸಬಹುದು.

Digiqole Ad

ಈ ಸುದ್ದಿಗಳನ್ನೂ ಓದಿ