• 8 ಸೆಪ್ಟೆಂಬರ್ 2024

ಭಾರತೀಯ ಸೇನೆಗೆ ಮತ್ತಷ್ಟು ಬಲ. ಧ್ರುವ್ ಹೆಲಿಕಾಪ್ಟರ್‌ಗಳ ಖರೀದಿಗೆ ಸಂಪುಟದಿಂದ ಅಸ್ತು.

 ಭಾರತೀಯ ಸೇನೆಗೆ ಮತ್ತಷ್ಟು ಬಲ. ಧ್ರುವ್ ಹೆಲಿಕಾಪ್ಟರ್‌ಗಳ ಖರೀದಿಗೆ ಸಂಪುಟದಿಂದ ಅಸ್ತು.
Digiqole Ad

ಭಾರತೀಯ ಸೇನೆಗೆ ಮತ್ತಷ್ಟು ಬಲ. ಧ್ರುವ್ ಹೆಲಿಕಾಪ್ಟರ್‌ಗಳ ಖರೀದಿಗೆ ಸಂಪುಟದಿಂದ ಅಸ್ತು.

ಭಾರತೀಯ ಸೇನೆ ಮತ್ತು ಭಾರತೀಯ ಕೋಸ್ಟ್‌ ಗಾರ್ಡ್‌ಗಾಗಿ 34 ಹೊಸ ಸುಧಾರಿತ ಲಘು ಹೆಲಿಕಾಪ್ಟರ್ (ALH) ಧ್ರುವ್ ಖರೀದಿಸುವ ಪ್ರಸ್ತಾವನೆಗೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. ಇದರೊಂದಿಗೆ ಟ್ಯಾಂಕರ್ ಯುದ್ದ ವಾಹನಗಳನ್ನು ಮೇಲ್ದರ್ಜೆಗೇರಿಸುವ ಯೋಜನೆಗಳಿಗೂ ಸರ್ಕಾರ ಅನುಮತಿ ನೀಡಿದೆ.

34 ಹೆಲಿಕಾಪ್ಟರ್‌ಗಳ ಪೈಕಿ ಭಾರತೀಯ ಸೇನೆಯು 25 ಹೆಲಿಕಾಪ್ಟರ್‌ಗಳನ್ನು ಪಡೆಯಲಿದ್ದು, 9 ಹೆಲಿಕಾಪ್ಟರ್‌ಗಳನ್ನು ಭಾರತೀಯ ಕೋಸ್ಟ್ ಗಾರ್ಡ್‌ಗೆ ನೀಡಲಾಗುತ್ತದೆ. ಈ ಹೆಲಿಕಾಪ್ಟರ್‌ಗಳನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆ (HAL) ಸ್ಥಳೀಯವಾಗಿ ಉತ್ಪಾದಿಸಲಿದೆ ಎಂದು ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಸೇನೆಯಲ್ಲಿ ಈಗ ಇರುವ ಲಘು ಹೆಲಿಕಾಪ್ಟರ್‌ಗಳು ಹಳೆಯದ್ದಾದ ಕಾರಣ ಅವುಗಳನ್ನು ಬದಲಾಯಿಸಲು ಇಲಾಖೆ ಮುಂದಾಗಿದೆ.

ಈ ಯೋಜನೆಗೆ ಸುಮಾರು 8,000 ಕೋಟಿ ರೂ. ವೆಚ್ಚ ತಗುಲಲಿದೆ. ಸ್ಥಳಿಯವಾಗಿಯೇ ಹೆಲಿಕಾಪ್ಟರ್‌ಗಳನ್ನು ನಿರ್ಮಿಸುವುದರಿಂದ ಸ್ವದೇಶಿ ಉತ್ಪನ್ನಗಳಿಗೆ ಉತ್ತೇಜನವೂ ಸಿಗಲಿದೆ. ಸುಧಾರಿತ ಲಘು ಹೆಲಿಕಾಪ್ಟರ್ ಧ್ರುವ್ 5.5 ಟನ್‌ಗಳಷ್ಟು ತೂಕ ಹೊಂದಿದೆ.

ಈ ಸುದ್ದಿಯನ್ನು ಓದಿದ್ದೀರಾ.? ಎರಡು ವರ್ಷದ ಮಗುವಿಗೆ ಜೀವಾವಧಿ ಶಿಕ್ಷೆ- ನಾರ್ತ್ ಕೊರಿಯಾ

ಸ್ಥಳೀಯವಾಗಿ ಈಗಿನ ಸೇನಾ ಕಾರ್ಯಾಚರಣೆಗಳಿಗೆ ಬಳಸಿಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಹುನಿಯೋಜಿತ ಕಾರ್ಯಗಳಿಗೆ ಭಾರತೀಯ ಸೇನೆಗೆ ಹೆಲಿಕಾಪ್ಟರ್‌ಗಳ ಅಗತ್ಯವಿದೆ. ಆದ್ದರಿಂದ ಸರ್ಕಾರ 34 ಹೆಲಿಕಾಪ್ಟರ್‌ಗಳ ಖರೀದಿಗೆ ಒಪ್ಪಿಗೆ ಸೂಚಿಸಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.

Digiqole Ad

ಈ ಸುದ್ದಿಗಳನ್ನೂ ಓದಿ