• 8 ಸೆಪ್ಟೆಂಬರ್ 2024

ಫೋಕ್ಸೋ ಪ್ರಕರಣದಲ್ಲಿ ಮತ್ತೊಬ್ಬ ಸ್ವಾಮೀಜಿ ಪೊಲೀಸ್ ಮಾಮನ ಅತಿಥಿ!

 ಫೋಕ್ಸೋ ಪ್ರಕರಣದಲ್ಲಿ ಮತ್ತೊಬ್ಬ ಸ್ವಾಮೀಜಿ ಪೊಲೀಸ್ ಮಾಮನ ಅತಿಥಿ!
Digiqole Ad

ಫೋಕ್ಸೋ ಪ್ರಕರಣದಲ್ಲಿ ಮತ್ತೊಬ್ಬ ಸ್ವಾಮೀಜಿ ಪೊಲೀಸ್ ಮಾಮನ ಅತಿಥಿ!

ತುಮಕೂರು : ರಾಜ್ಯದಲ್ಲಿ ಮತ್ತೊಬ್ಬ ಸ್ವಾಮೀಜಿಯ ಕಾವಿಕಳಚಿ ಬೀಳುವ ಹಂತಕ್ಕೆ ತಲುಪಿದೆ. ಮುರುಘ ಮಠದ ಸ್ವಾಮೀಜಿ ಫೋಕ್ಲೋ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರಕರಣ ಮಾಸುವ ಮುನ್ನವೆ ಮತ್ತೊಬ್ಬ ಸ್ವಾಮೀಜಿ ಪೋಕ್ಸ ಪ್ರಕರಣದಲ್ಲಿ ಪೊಲೀಸ್ರ ವಶದಲ್ಲಿದ್ದಾರೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿದುರ್ಗ ಬಳಿಯ ಹಂಗರಹಳ್ಳಿಯ ವಿದ್ಯಾಚೌಡೇಶ್ವರಿ ಮಠದ ಬಾಲ ಮಂಜುನಾಥ ಸ್ವಾಮೀಜಿಯನ್ನ ಫೋಕ್ಲೋ ಪ್ರಕರಣದಡಿ ಪೊಲೀಸ್ರು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿಯನ್ನು ಓದಿದ್ದೀರಾ: ಶಬರಿಮಲೆ ಯಾತ್ರಾರ್ಥಿಗಳಿಗೆ ಶೌಚಾಲಯದ ನೀರಿನ ಆಹಾರ! ಆರೋಪಿ ಅರೆಸ್ಟ್

ಸ್ವಾಮೀಜಿ ಅಭಿಷೇಕ್ ಎನ್ನುವ ವ್ಯಕ್ತಿಗೆ ತಮಗೆ ಚರ್ಮ ರೋಗದ ಕುರಿತಂತೆ ಹೇಳಿಕೊಂಡಿದ್ದರು. ಅಭಿಷೇಕ್ ಮಹಿಳೆಯನ್ನು ಪರಿಚಯಿಸಿ ವೈದ್ಯ ಎಂದು ಹೇಳಿದ್ದ.ಮಹಿಳೆಗೆ ಚರ್ಮ ರೋಗ ತೋರಿಸಲು ಸ್ವಾಮೀಜಿಗೆ ಇಷ್ಟವಿಲ್ಲದ ಕಾರಣ ಅವರ ಮೊಬೈಲ್ ಗೆ ಫೋಟೋ ಕಳುಹಿಸಿದ್ದರು.ವ್ಯಾಧಿಯ ಬಗ್ಗೆ ವೈದ್ಯರ ಬಳಿ ಹೇಳಿಕೊಳ್ಳಲು ಸ್ವಾಮೀಜಿಗೆ ವಿಡಿಯೋ ಕಾಲ್ ನಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಆಗ, ಸ್ವಾಮೀಜಿಯವರು ಚರ್ಮ ವ್ಯಾಧಿಯಿರುವ ಜಾಗವನ್ನು ತೋರಿಸಿದ್ದರು.ಅದೇ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡು ಅಭಿಷೇಕ್ ಹಾಗೂ ಮತ್ತಿತರರು ಸ್ವಾಮೀಜಿಯವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರೆಂದು ಮಠದ ದೇವಸ್ಥಾನದ ಟ್ರಸ್ಟಿ ಕೆ. ಅಭಿಲಾಷ್ ಎಂಬುವರು ಪೊಲೀಸರಲ್ಲಿ ನ. 6ರಂದು ದೂರು ದಾಖಲಿಸಿದ್ದರು. ಕುಣಿಗಲ್ ತಾಲೂಕಿನ ಹೊಸಕೆರೆ ಗ್ರಾಮದ ಎಚ್.ಎಸ್. ಅಭಿಷೇಕ್, ಬೆಂಗಳೂರಿನಲ್ಲಿರುವ ಯುವತಿ, ಪಾಂಡವಪುರ ಬಳಿಯ ವಿಜಯಕಾಳಿ ದೇವಸ್ಥಾನದ ರಾಜೇಶ್, ಶ್ರೀನಿವಾಸ್, ರಾಮನಗರ ಜಿಲ್ಲೆಯ ಕವನಪುರ ಗ್ರಾಮದ ಚೇತನ್, ಕುಣಿಗಲ್ ನ ನಂದೀಶ್ ಎಂಬುವರ ವಿರುದ್ದ ಪ್ರಕರಣ ದಾಖಲಾಗಿತ್ತು.ಇದೀಗ ದೇವಸ್ಥಾನದ ಟ್ರಸ್ಟಿ ನೀಡಿದ್ದ ದೂರಿನನ್ವಯ ಪೊಲೀಸರು ಅಭಿಷೇಕ್ ರನ್ನು ಕರೆಯಿಸಿ ವಿಚಾರಣೆ ನಡೆಸಿದಾಗ ಆತ, ಸ್ವಾಮೀಜಿಯವರು ಹಲವು ದಿನಗಳ ಹಿಂದೆ ಮಠದಲ್ಲಿ ಅಪ್ರಾಪ್ತೆಯೊಬ್ಬಳಿಗೆ ಲೈಂಗಿಕ ಕಿರುಕುಳ ಕೊಟ್ಟಿರುವುದಾಗಿ ಆರೋಪಿಸಿದ್ದ. ಈ ವಿಚಾರ ಪೋಕ್ಸೋ ಕಾಯ್ದೆಯಡಿ ಬರುವುದರಿಂದ ಮಠಕ್ಕೆ ಆಗಮಿಸಿದ ಮಠಕ್ಕೆ ಆಗಮಿಸಿದ ಪೊಲೀಸರು, ಗುರುವಾರ ಸಂಜೆಯಿಂದಲೇ ಮಠದಲ್ಲಿ ಪರಿಶೀಲನೆ ನಡೆಸಿದ್ದರು. ಆಗ ಸಿಕ್ಕ ಕೆಲವು ದಾಖಲೆಗಳನ್ನು ಆಧರಿಸಿ, ಸ್ವಾಮೀಜಿಯವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ಈ ಸುದ್ಧಿ ಓದಿದ್ದೀರಾ: ಇವಳು ತಾಯಿನಾ ಅಲ್ಲಾ ರಾಕ್ಷಸಿಯಾ!

 

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ