• 8 ಸೆಪ್ಟೆಂಬರ್ 2024

ಅಡಿಕೆ ಬೆಳೆಗಾರರಿಗೆ ಬಿಗ್ ಶಾಕ್.! ಶ್ರೀ ಲಂಕಾದಿಂದ 5ಟನ್ ಅಡಿಕೆ ಆಮದು.

 ಅಡಿಕೆ ಬೆಳೆಗಾರರಿಗೆ ಬಿಗ್ ಶಾಕ್.! ಶ್ರೀ ಲಂಕಾದಿಂದ 5ಟನ್ ಅಡಿಕೆ ಆಮದು.
Digiqole Ad

ಅಡಿಕೆ ಬೆಳೆಗಾರರಿಗೆ ಬಿಗ್ ಶಾಕ್.! ಶ್ರೀ ಲಂಕಾದಿಂದ 5ಟನ್ ಅಡಿಕೆ ಆಮದು.

ಶ್ರೀಲಂಕಾದಿಂದ ಅಡಿಕೆ ಆಮದು ಸಂಬಂಧ ಬ್ರಿಟನ್ ಮೂಲದ ಎಸ್‌ರಾಂ ಅಂಡ್ ಎಂರಾಂ ಗ್ರೂಪ್ ಒಪ್ಪಂದ ಮಾಡಿಕೊಂಡಿದೆ. ಶ್ರೀಲಂಕಾ ಮೂಲದ ವ್ಯಾಪಾರಿ ಸಂಸ್ಥೆ ಪ್ರೈಮ್ ಸ್ಟಾ‌ರ್ ಪ್ರೈವೇಟ್ ಲಿಮಿಟೆಡ್ ಜತೆ ಅಡಿಕೆ ಆಮದು ಒಪ್ಪಂದ ಮಾಡಿಕೊಂಡಿರುವುದಾಗಿ ಎಸ್‌ರಾಂ ಅಂಡ್‌ ಎಂರಾಂ ಗ್ರೂಪ್ ಶುಕ್ರವಾರ ತಿಳಿಸಿದೆ.

ಈ ಸುದ್ಧಿಯನ್ನು ಓದಿದ್ದೀರಾ.? ನ್ಯೂ ಜೆರ್ಸಿಯಲ್ಲಿ ಶ್ರೀ ಕಾಲಭೈರವೇಶ್ವರ ದೇಗುಲ ನಿರ್ಮಾಣ

ದೇಶದಲ್ಲಿ ಅಡಿಕೆ ಸಾಂಸ್ಕೃತಿಕ ಮಹತ್ವ ಹೊಂದಿದ್ದು, ದೇಶದ ಹಲವು ಸಂಪ್ರದಾಯ ಹಾಗೂ ಸಮಾರಂಭಗಳಲ್ಲಿ ಇದನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಅಡಿಕೆ ಮಾರಾಟ ಹಂಗಾಮು ಆರಂಭವಾಗಿರುವ ಸಂದರ್ಭದಲ್ಲೇ ಲಂಕಾದಿಂದ ಭಾರಿ ಪ್ರಮಾಣದಲ್ಲಿ ಆಮದಿಗೆ ಬ್ರಿಟನ್ ಕಂಪನಿ ಮುಂದಾಗಿರುವುದರಿಂದ ಸಹಜವಾಗಿಯೇ ಅಡಿಕೆ ಬೆಳೆಗಾರರು ಕಂಗಾಲಾಗುವಂತಾಗಿದೆ. ಭಾರತ ಸಹಜವಾಗಿ ಇಂಡೋನೇಷ್ಯಾ, ಬಾಂಗ್ಲಾದೇಶ ಹಾಗೂ ಶ್ರೀಲಂಕಾದಿಂದ ಅಡಿಕೆ ಆಮದು ಮಾಡಿಕೊಳ್ಳುತ್ತದೆ. ಗುಣಮಟ್ಟ ಕಾಯ್ದುಕೊಳ್ಳುವ ಸಲುವಾಗಿ ಕೇಜಿಗೆ 351 ರು.ಗಿಂತ ಕಡಿಮೆ ಇಲ್ಲದ ಅಡಿಕೆ (ಸುಪಾರಿ) ಆಮದಿಗೆ ಮಾತ್ರವೇ ಅವಕಾಶವಿದೆ ಎಂದುದು ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯ ತಿಳಿಸಿದೆ.

2022ರ ಏಪ್ರಿಲ್-ಡಿಸೆಂಬರ್ ಅವಧಿಯಲ್ಲಿ ಭಾರತ 53.71 ಕೋಟಿ ರು. ಮೌಲ್ಯದ ಅಡಿಕೆ ಆಮದು ಮಾಡಿಕೊಂಡಿತ್ತು. ಆದರೆ 2023ರ ಏಪ್ರಿಲ್-ಡಿಸೆಂಬರ್ ಅವಧಿಯಲ್ಲಿ ಇದು 4.04 ಕೋಟಿ ರು.ಗೆ ಕುಸಿದಿತ್ತು. ಆದರೆ ಈಗ ಭಾರಿ ಪ್ರಮಾಣದಲ್ಲಿ ಲಂಕಾದಿಂದ ಅಡಿಕೆ ಆಮದಿಗೆ ಬ್ರಿಟನ್ ಕಂಪನಿ ಒಪ್ಪಂದ ಮಾಡಿಕೊಂಡಿದೆ.

ಈ ಸುದ್ಧಿಯನ್ನು ಓದಿದ್ದೀರಾ.? ಓಣಂ ಹಬ್ಬದ ಹಿಂದಿನ ಕಥೆ!ಆಚರಣೆ ಹೇಗೆ?

Digiqole Ad

ಈ ಸುದ್ದಿಗಳನ್ನೂ ಓದಿ