• 8 ಸೆಪ್ಟೆಂಬರ್ 2024

ಟೆಸ್ಟ್ ಕ್ರಿಕೆಟಿನಲ್ಲಿ ದಾಖಲೆ ನಿರ್ಮಿಸಿದ ಮಾರಕ ವೇಗಿ ಜೇಮ್ಸ್ ಆಂಡರ್ಸನ್! 700 ವಿಕೆಟ್ ಕಿತ್ತು ವಿಶ್ವದಾಖಲೆ

 ಟೆಸ್ಟ್ ಕ್ರಿಕೆಟಿನಲ್ಲಿ ದಾಖಲೆ ನಿರ್ಮಿಸಿದ ಮಾರಕ ವೇಗಿ ಜೇಮ್ಸ್ ಆಂಡರ್ಸನ್! 700 ವಿಕೆಟ್ ಕಿತ್ತು ವಿಶ್ವದಾಖಲೆ
Digiqole Ad

ಟೆಸ್ಟ್ ಕ್ರಿಕೆಟಿನಲ್ಲಿ ದಾಖಲೆ ನಿರ್ಮಿಸಿದ ಮಾರಕ ವೇಗಿ ಜೇಮ್ಸ್ ಆಂಡರ್ಸನ್! 700 ವಿಕೆಟ್ ಕಿತ್ತು ವಿಶ್ವದಾಖಲೆ.

ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಮತ್ತು ಭಾರತ ನಡುವಣ 5ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ  2 ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟೆಸ್ಟ್ ಕ್ರಿಕೆಟ್‌ನಲ್ಲಿ ಬರೋಬ್ಬರಿ 700 ವಿಕೆಟ್ ಉರುಳಿಸುವ ಮೂಲಕ ಎಂಬುದು ವಿಶೇಷ.

ಈ ಸುದ್ದಿಯನ್ನು ಓದಿದ್ದೀರಾ.? ಹೆತ್ತ ತಾಯಿಯಷ್ಟೇ ಶ್ರೇಷ್ಠ ಕಲ್ಲುರ್ಟಿ ದೈವ!

ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್ ಪಡೆದ ವಿಶ್ವದ ಮೊದಲ ವೇಗದ ಬೌಲ‌ರ್ ಎಂಬ ವಿಶ್ವ ದಾಖಲೆಯನ್ನು ತನ್ನದಾಗಿಸಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ 3ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. 41 ವರ್ಷದ ಜೇಮ್ಸ್ ಆ್ಯಂಡರ್ಸನ್ 187 ಟೆಸ್ಟ್ ಪಂದ್ಯಗಳ ಮೂಲಕ 700 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಕೆರಿಯರ್ ಆರಂಭಿಸಿದ ಜೇಮ್ಸ್ ಆ್ಯಂಡರ್ಸನ್ ಇದುವರೆಗೆ 39873 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 18568 ರನ್ ನೀಡುವ ಮೂಲಕ ಒಟ್ಟು 700 ವಿಕೆಟ್‌ ಗಳನ್ನು ಕಬಳಿಸಿದ್ದಾರೆ. ಇದೇ ವೇಳೆ 32 ಬಾರಿ 5 ವಿಕೆಟ್ ಕಬಳಿಸಿದರೆ, 3 ಬಾರಿ 10 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಟೆಸ್ಟ್ ಕ್ರಿಕೆಟ್‌ನಲ್ಲಿ 700+ ವಿಕೆಟ್ ಕಬಳಿಸಿರುವುದು ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಮತ್ತು ಆಸ್ಟ್ರೇಲಿಯಾದ ಶೇನ್ ವಾರ್ನ್ ಮಾತ್ರ. ಅದರಲ್ಲೂ ಇವರಿಬ್ಬರೂ ಸ್ಪಿನ್ನರ್ ಗಳೆಂಬುದು ಗಮನಾರ್ಹ. ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್ ಕಬಳಿಸಿದ ವಿಶ್ವದ ಮೊದಲ ವೇಗದ ಬೌಲ‌ರ್ ಹಾಗೂ ಈ ಸಾಧನೆ ಮಾಡಿದ ವಿಶ್ವದ 3ನೇ ಬೌಲರ್ ಎಂಬ ಹೆಗ್ಗಳಿಕೆಗೂ ಆಂಡರ್ಸನ್ ಪಾತ್ರರಾಗಿದ್ದಾರೆ.

ಈ ಸುದ್ದಿಯನ್ನು ಓದಿದ್ದೀರಾ.? ವಿಶ್ವವನ್ನೇ ನಡುಗಿಸಿದ್ದ ಸರ್ವಾಧಿಕಾರಿ ಹಿಟ್ಲರ್!

Digiqole Ad

ಈ ಸುದ್ದಿಗಳನ್ನೂ ಓದಿ