• 27 ಜುಲೈ 2024

ಹನುಮಾನ್ ಚಾಲಿಸಾ: ಶೋಭಾ ಕರಂದ್ಲಾಜೆ ಸೇರಿ ಹಲವು ಹಿಂದೂ ಪರ ಕಾರ್ಯಕರ್ತರು ವಶಕ್ಕೆ

 ಹನುಮಾನ್ ಚಾಲಿಸಾ: ಶೋಭಾ ಕರಂದ್ಲಾಜೆ ಸೇರಿ ಹಲವು ಹಿಂದೂ ಪರ ಕಾರ್ಯಕರ್ತರು ವಶಕ್ಕೆ
Digiqole Ad

ಹನುಮಾನ್ ಚಾಲಿಸಾ: ಶೋಭಾ ಕರಂದ್ಲಾಜೆ ಸೇರಿ ಹಲವು ಹಿಂದೂ ಪರ ಕಾರ್ಯಕರ್ತರು ವಶಕ್ಕೆ

ಬೆಂಗಳೂರಿನ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿಂದು ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಇದರಿಂದಾಗಿ ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ಇಂದು ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿಯಿಂದ ಭಾಗವಧ್ವಜದೊಂದಿಗೆ ಹನುಮಾನ್ ಚಾಲೀಸ ಪಠಣ ಮಾಡಿಕೊಂಡು ಶಾಂತಿಯುತ ಮೆರವಣಿಗೆಯಲ್ಲಿ ಹಮ್ಮಿಕೊಂಡಿದ್ದರು.

ಇದರಂತೆ ನೂರಾರು ಸಂಖ್ಯೆಯ ಹಿಂದೂಪರ ಕಾರ್ಯಕರ್ತರು ನಗರತ್ ಪೇಟೆಗೆ ಸೇರಿದ್ದರು. ಈ ಮೆರವಣಿಗೆಗೆ ಬಿಜೆಪಿ ನಾಯಕರಾದ ಸುರೇಶ್ ಕುಮಾರ್ ಹಾಗೂ ಶೋಭಾ ಕರಂದ್ಲಾಜೆ ಕೂಡ ಭಾಗಿಯಾಗಿದ್ದರು. ಆದರೆ, ಇದಕ್ಕೆ ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆಯಿತು.ಇದೇ ವೇಳೆ ಪೊಲೀಸರು ಸುರೇಶ್ ಕುಮಾರ್ ಅವರನ್ನು ಎಳೆದಾಡಿದ ಬೆಳವಣಿಗೆ ಕೂಡ ಕಂಡು ಬಂದಿತು.ಹಲ್ಲೆಗೊಳಗಾದ ಮುಖೇಶ್ನನ್ನು ಪೊಲೀಸರು ಜೀಪ್ನಲ್ಲಿ ಕರೆದೊಯ್ಯಲು ಮುಂದಾಗಿದ್ದರು. ಈ ವೇಳೆ ಪೊಲೀಸ್ ವಾಹನದ ಮುಂದೆ ನಿಂತು ಶಾಸಕ ಸುರೇಶ್ಕುಮಾರ್ ಪ್ರತಿಭಟನೆ ನಡೆಸಿದರು. ಈ ವೇಳೆ ತಳ್ಳಾಟ, ನೂಕಾಟ ನಡೆದಿದ್ದು, ಶಾಸಕ ಸುರೇಶ್ಕುಮಾರ್ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು.

ನೀತಿ ಸಂಹಿತೆ ಜಾರಿಯಾಗಿದೆ ಪ್ರತಿಭಟನೆ ಮಾಡಲು ಅವಕಾಶ ಇಲ್ಲ ಎಂದು ಪೊಲೀಸರು ಹೇಳಿದರು. ಇದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೆ ಹಿಂದೂ ಕಾರ್ಯಕರ್ತರು ಮುಖೇಶ್ನನ್ನು ಪೊಲೀಸ್ ವಾಹನದಿಂದ ಕೆಳಗೆ ಇಳಿಸಿಕೊಂಡರು.ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆಯೇ ಪೊಲೀಸರು ಪೊಲೀಸರು ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಘಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್ ಅವರು, ಅಸಹನೆ ಅನ್ನೋದು ಈ ಮಟ್ಟಕ್ಕೆ ಹೋಗಬಾರದು. ಇದು ಉದ್ದೇಶ ಪೂರ್ವಕವಾಗಿ ಮಾಡಿರುವ ಹಲ್ಲೆಯಾಗಿದೆ. ತನ್ನ ಪಾಡಿಗೆ ಇದ್ದ ಯುವಕನ ಮೇಲೆ ಹೀಗೆ ಹಲ್ಲೆ ಮಾಡಿದ್ದಾರೆ. ಒಟ್ಟಾರೆಯಾಗಿ ಸಮಾಜದ ಶಾಂತಿ ಕದಡಿದಂತಾಗಿದೆ. ಇದೊಂದು ನೆಪ, ಉದ್ದೇಶಪೂರ್ವಕವಾಕವಾಗಿ ಮಾಡಿದಂತಿದೆ. ಹಲ್ಲೆ ಮಾಡಿದವರಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.

ಹಲ್ಲೆ ನಡೆದ ಸಮಯದಲ್ಲಿ ಆತನ ರಕ್ಷಣೆಗೂ ಯಾರು ಇರಲಿಲ್ಲ ಎನ್ನಲಾಗಿದೆ. ಎಲ್ಲ ಸಮುದಾಯದವರು ಈ ವಿಷಯವಾಗಿ ಮುಂದೆ ಬರಬೇಕು. ಈ ರೀತಿಯಾಗಿ ನಡೆಯುತ್ತಿರುವ ಸರಣಿ ಪ್ರಕರಣಗಳ ಬಗ್ಗೆ ಪೊಲೀಸ್ ಇಲಾಖೆಯವರು ಹೆಚ್ಚು ಕಾರ್ಯ ಪ್ರವೃತ್ತರಾಗಬೇಕು. ಇವರೆಲ್ಲ ಬೇಕು ಎಂದೇ ಈ ರೀತಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ಸುದ್ಧಿ ಓದಿದ್ದೀರಾ: ಸಂಭಾಜಿ ಮಹಾರಾಜನ ಕಥೆ,ಕೇಸರಿ ವೀರನ ಚರಿತ್ರೆ !

GOLD FACTORY NEWS

Gold Factory News stands out as a key news portal in Karnataka, offering a wide array of news that spans local, national, and international events. It’s a hub for readers seeking updates on various topics including politics, economy, sports, and entertainment. The website’s commitment to journalistic excellence ensures that every story is presented with depth and accuracy. With a user-friendly interface, Gold Factory News makes it easy for readers to navigate through the latest headlines and in-depth articles. The platform not only informs but also engages its audience with interactive features and insightful analysis. As a trusted source of news, it connects Karnataka to the world and brings global perspectives to its readers. Gold Factory News embodies the dynamic nature of today’s media landscape, where information is both instantaneous and influential.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ