• 27 ಜುಲೈ 2024

ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಮನೆ ಮೇಲೆ ಚುನಾವಣಾ ಅಧಿಕಾರಿಗಳಿಂದ ದಿಡೀರ್ ದಾಳಿ.

 ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಮನೆ ಮೇಲೆ ಚುನಾವಣಾ ಅಧಿಕಾರಿಗಳಿಂದ ದಿಡೀರ್ ದಾಳಿ.
Digiqole Ad

ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಮನೆ ಮೇಲೆ ಚುನಾವಣಾ ಅಧಿಕಾರಿಗಳಿಂದ ದಿಡೀರ್ ದಾಳಿ.

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ತಮ್ಮ ಗೃಹ ಕಚೇರಿಯಲ್ಲಿ ಮಾ.19 ಮಂಗಳವಾರ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹಾಗೂ ಆಶಾ ಕಾರ್ಯಕರ್ತೆಯರ ಸಭೆಯನ್ನು ಚುನಾವಣಾಧಿಕಾರಿಗಳು ದಾಳಿ ನಡೆಸಿ ಅರ್ಧಕ್ಕೆ ಮೊಟಕುಗೊಳಿಸಿದರು. ಸಚಿವೆ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸುವುದಾಗಿಯೂ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಕುವೆಂಪು ನಗರದಲ್ಲಿರುವ ಲಕ್ಷ್ಮಿ ಅವರ ವಾಸದ ಮನೆಯ ಪಕ್ಕದಲ್ಲಿರುವ ವಿಶಾಲವಾದ ಗೃಹಕಚೇರಿ ಬಳಿ ಮಂಗಳವಾರ ಬೆಳಿಗ್ಗೆಯೇ 500ಕ್ಕೂ ಹೆಚ್ಚು ಅಂಗನವಾಡಿ- ಆಶಾ ಕಾರ್ಯಕರ್ತೆಯರು ಸೇರಿದ್ದರು.

ಈ ಸುದ್ದಿಯನ್ನು ಓದಿದ್ದೀರಾ.?ಕಷ್ಟದ ಬದುಕನ್ನು ಮೆಟ್ಟಿ ನಿಂತು ಮೋದಿ ಕೈಯಲ್ಲಿ ಪ್ರಶಸ್ತಿ ಗೆದ್ದ ಯೂಟ್ಯೂಬ‌ರ್.

ಇದನ್ನು ಕಂಡು ಅಪರಿಚಿತರೊಬ್ಬರು ಸಂಶಯದಿಂದ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ನೇತೃತ್ವದಲ್ಲಿ ಚುನಾವಣಾಧಿಕಾರಿಗಳು ಹಾಗೂ ಫೈಯಿಂಗ್ ಸ್ಕ್ಯಾಡ್ ಸಿಬ್ಬಂದಿಗಳು ದಾಳಿ ಮಾಡಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಕಾರ್ಯಕರ್ತೆಯರನ್ನು ಸಭೆಯಿಂದ ಹೊರಗೆ ಕಳುಹಿಸಿ ಹಲವರಿಂದ ಮಾಹಿತಿ ಸಂಗ್ರಹಿಸಿದರು. ಬಳಿಕ ಸಚಿವೆ ಲಕ್ಷ್ಮೀ ಅವರಿಂದಲೂ ವಿವರ ಪಡೆದದ್ದಾರೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಓದಿದ್ದೀರಾ.?ವಿಧಾನಸೌಧ ದಲ್ಲಿ ‘ಅರಿಶಿನ ಕುಂಕುಮ’ ಬಳಸದಂತೆ ಸುತ್ತೋಲೆ : ಸಿಎಂ ಸ್ಪಷ್ಟನೆ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ’ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಪುತ್ರ ಮೃಣಾಲ್ ಹೆಬ್ಬಾಳಕರ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರನ್ನು ತಮ್ಮ ಮನೆಗೆ ಕರೆಯಿಸಿ ಸಭೆ ನಡೆಸಿದ್ದಾರೆ. ಚುನಾವಣೆಯಲ್ಲಿ ತಮ್ಮ ಮಗನ ಪರವಾಗಿ ಮತಗಳನ್ನು ಹಾಕಿಸುವಂತೆ ಒತ್ತಡ ಹೇರುತ್ತಿದ್ದಾರೆ. ಇದು ಅಧಿಕಾರದ ದುರುಪಯೋಗ ಎಂದು ದೂರು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ’ ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ