• 9 ಡಿಸೆಂಬರ್ 2024

ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸುತ್ತಿರುವ ಬ್ರಿಜೇಶ್ ಚೌಟ

 ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸುತ್ತಿರುವ ಬ್ರಿಜೇಶ್ ಚೌಟ
Digiqole Ad

ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸುತ್ತಿರುವ ಬ್ರಿಜೇಶ್ ಚೌಟ

ದ.ಕ: ಬಿಜೆಪಿಯ ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟರವರು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರಲ್ಲಿ, ಯುವಕರಲ್ಲಿ ಹೊಸ ಹುರುಪನ್ನು ಮೂಡಿಸಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಸಮೀಕ್ಷೆ ನಡೆಸಿದ್ದಾರೆ.

ಬ್ರಿಜೇಶ್ ಚೌಟ ಪ್ರಚಾರಕ್ಕೆ ತೆರಳಿದ ಸಂದರ್ಭದಲ್ಲಿ ಬೃಹತ್ ಸಂಖ್ಯೆಯಲ್ಲಿ ಯುವಕರು ಉತ್ತಮ ಪ್ರತಿಕ್ರಿಯೆಯನ್ನು ನೀಡುತ್ತಿರುವುದು ದಕ್ಷಿಣ ಕನ್ನಡ ಬಿಜೆಪಿಗೆ ಹೊಸ ಬೆಳವಣಿಗೆಯಾಗಿದೆ ಎಂದು ತಿಳಿದುಬಂದಿದೆ.

ದೇಶದ ರಕ್ಷಕನಾಗಿ ಭಾರತಮಾತೆಯ ಪುತ್ರನಾಗಿ ಕೆಲಸ ಮಾಡಿದ ವೀರ ಯೋಧ ಬ್ರಿಜೇಶ್ ಚೌಟ,ಇದೀಗ ಚೌಟ ಪುತ್ತೂರು, ಸುಳ್ಯ,ಬೆಳ್ಳಾರೆ ಹಾಗೂ ಅನೇಕ ಭಾಗದಲ್ಲಿ ಬಹುತೇಕ ಕಾರ್ಯಕರ್ತರ ಮನೆಗಳಿಗೆ ಹಾಗೂ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿರುವುದು, ಅಲ್ಲಿ ಕಾರ್ಯಕರ್ತರು ಸ್ಪಂದಿಸಿರುವುದು  ಬಿಜೆಪಿಗೆ ಇನ್ನಷ್ಟು ಉತ್ಸಾಹವನ್ನು ಮೂಡಿಸಿದೆ ಎಂದು ಬಿಜೆಪಿಯ ಹಿರಿಯ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಭೂ ಸೇನೆಯ ಗೋರ್ಖಾ ರೈಫಲ್ಸ್‌ನ 7ನೇ ಬೆಟಾಲಿಯನ್‌ನಲ್ಲಿ ಅಧಿಕಾರಿಯಾಗಿದ್ದರು. ಅಸ್ಸಾಂ ಮತ್ತು ಮಣಿಪುರ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ.2011ರಲ್ಲಿ ಭಾರತೀಯ ಸೇನೆಯಿಂದ ಸ್ವಯಂ ನಿವೃತ್ತಿ ಪಡೆದು ಊರಿಗೆ ಮರಳಿದ್ದ ಬ್ರಿಜೇಶ್ ಚೌಟರವರು ಆರೆಸ್ಸೆಸ್‌ ಮತ್ತು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. 2013ರಲ್ಲಿ ಯುವ ಮೋರ್ಚಾದ ದ.ಕ. ಜಿಲ್ಲಾ ಪ್ರ. ಕಾರ್ಯದರ್ಶಿ, 2016-19ರಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದರು, ಆನಂತರ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಪ್ರಭಾರಿಯಾಗಿ ಕೆಲಸ ಮಾಡಿದ್ದರು.

ಕರಾವಳಿಯ ಜನಪದ ಕ್ರೀಡೆ ತುಳುನಾಡ ಸಂಸ್ಕೃತಿಯಾದ ಕಂಬಳವನ್ನು ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಕಂಬಳ ದ ಪರವಾಗಿ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಕೂಡ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ, ಯುವ ಸ್ನೇಹಿತರ ತಂಡವನ್ನು ಕಟ್ಟಿಕೊಂಡು ಸತತ ಏಳು ವರ್ಷಗಳಿಂದ ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಯಶಸ್ವಿಯಾಗಿ ಕಂಬಳ ಆಯೋಜಿಸಿದ್ದರು. ಬ್ರಿಜೇಶ್ ಚೌಟಾರವರು ಅವಿವಾಹಿತರಾಗಿಯೇ ಇದ್ದು ತನ್ನ ಸಂಪೂರ್ಣ ಜೀವನವನ್ನು ದೇಶ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಇದೀಗ ಬ್ರಿಜೇಶ್ ಚೌಟ ರಾಜಕೀಯಕ್ಕೆ ಆಗಮಿಸಿ, ದಕ್ಷಿಣ ಕನ್ನಡದಲ್ಲಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

G-SPACE AD AGENCY 

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ