• 27 ಜುಲೈ 2024

ಡ್ರೋನ್ ಮೂಲಕ ನಾಲ್ವರು ಶಂಕಿತ ನಕ್ಸಲರ ಶೋಧ.

 ಡ್ರೋನ್ ಮೂಲಕ ನಾಲ್ವರು ಶಂಕಿತ ನಕ್ಸಲರ ಶೋಧ.
Digiqole Ad

ಡ್ರೋನ್ ಮೂಲಕ ನಾಲ್ವರು ಶಂಕಿತ ನಕ್ಸಲರ ಶೋಧ.

ಸುಬ್ರಹ್ಮಣ್ಯ: ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶನಿವಾರ ಸಂಜೆ ನಾಲ್ವರು ಶಂಕಿತರು ಭೇಟಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಹಾಗೂ ನಕ್ಸಲ್ ನಿಗ್ರಹ ದಳದವರು ವಿವಿಧ ರೀತಿಗಳಲ್ಲಿ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ಶಂಕಿತರಲ್ಲಿ ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಇದ್ದರು ಎಂದು ಹೇಳಲಾಗಿದ್ದು, ಮನೆಯಲ್ಲಿ ಸುಮಾರು 45 ನಿಮಿಷ ಕಳೆದಿದ್ದ ಅವರು, ಆ ಮನೆಯಿಂದ ಊಟ, ಅಕ್ಕಿ, ಸಕ್ಕರೆ ಪಡೆದು ಅವರು ಬಂದ ದಾರಿಯಲ್ಲೆ ಕಾಡಿಗೆ ಮರಳಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಓದಿದ್ದೀರಾ.?ಲಾಡ್ಲೆ ಮಶಾಕ್ ದರ್ಗಾದ ಒಳಗಡೆ ಶಿವಲಿಂಗ.! ಹಿಂದೂಗಳಿಂದ ಶಿವಲಿಂಗಕ್ಕೆ ಪೂಜೆ.

ಭಾನುವಾರ ಬೆಳಿಗ್ಗೆ ನಕ್ಸಲ್ ನಿಗ್ರಹ ದಳದ ಡಿವೈಎಸ್‌ಪಿ ರಾಘವೇಂದ್ರ, ಪುತ್ತೂರು ಉಪವಿಭಾಗದ ಡಿವೈಎಸ್‌ಪಿ ಅರುಣ್ ನಾಗೇಗೌಡ, ಸುಬ್ರಹ್ಮಣ್ಯ ಪಿಎಸ್‌ಐ ಕಾರ್ತಿಕ್ ಸೇರಿದಂತೆ ನಕ್ಸಲ್ ನಿಗ್ರಹ ದಳದ ಅಧಿಕಾರಿಗಳು, ಸಿಬ್ಬಂದಿ, ಗುಪ್ತದಳದ ಅಧಿಕಾರಿಗಳು ಭೇಟಿ ನೀಡಿ ಮನೆಯವರಿಂದ ಮಾಹಿತಿ ಪಡೆಡಿದ್ದಾರೆ. ಸಣ್ಣದಾಗಿ ಮಳೆಯಾಗುತ್ತಿದ್ದಾಗ ಅರಣ್ಯ ಪ್ರದೇಶದಿಂದ ಕಾಡಂಚಿನ ಮನೆಯ ಬಳಿಗೆ ಬಂದಿದ್ದ ಶಂಕಿತರಿಗೆ ವ್ಯಕ್ತಿಯೊಬ್ಬರು ಸಿಕ್ಕಿದ್ದು, ಅವರ ಬಳಿ ಮಾತನಾಡಿದ್ದಾರೆ. ಅಲ್ಲಿಂದ ರಸ್ತೆ ಬದಿಯ ಮನೆಯೊಂದಕ್ಕೆ ತೆರಳಲು ಉದ್ದೇಶಿಸಿದ್ದ ಶಂಕಿತರು, ಆ ಮನೆಯ ಜಾಗಕ್ಕೆ ಸೋಲಾ‌ರ್ ಬೇಲಿ ಅಳವಡಿಸಿದ್ದರಿಂದ ಅಲ್ಲಿಂದ ಬೇರೆ ಮನೆಗೆ ತೆರಳಿದ್ದಾರೆ ಎನ್ನಲಾಗಿದೆ. ಬಣ್ಣದ ವಸ್ತ್ರ ಧರಿಸಿದ್ದ ಶಂಕಿತರು ತಲೆಗೆ ಬಟ್ಟೆ ಸುತ್ತಿಕೊಂಡಿದ್ದರು. ‘ನಾವು ಯಾರೆಂದು ನಿಮಗೆ ತಿಳಿದಿದೆಯಾ?’ ಎಂದು ಮನೆಯವರಲ್ಲಿ ಕೇಳಿದ್ದಾರೆ ಎಂದು ಹೇಳಲಾಗಿದೆ. ‘ಕಳೆದ ವಾರ ನಮ್ಮ ತಂಡದ ಸದಸ್ಯರೇ ಕೂಜಿಮಲೆ ಎಸ್ಟೇಟ್ ಅಂಗಡಿಗೆ ಹೋಗಿದ್ದು’ ಎಂದೂ ಕೂಡ ಅವರು ತಿಳಿಸಿದ್ದಾರೆ.

ಬಳಿಕ ಕೆಲ ವಿಚಾರಗಳ ಬಗ್ಗೆ ಮನೆಯವರೊಂದಿಗೆ ಮಾತುಕತೆ ನಡೆಸಿ. ಮನೆಯ ಹೊರಗಿದ್ದ ಕೆಲಸದವರಲ್ಲೂ ಮಾತನಾಡಿದ್ದಾರೆ ಎಂದು ಹೇಳಲಾಗಿದೆ. ‘ನಾವು ಬರುವ ವೇಳೆ ನಮ್ಮನ್ನು ವ್ಯಕ್ತಿಯೊಬ್ಬರು ನೋಡಿದ್ದು, ಅವರು ಹೊರಗೆ ಮಾಹಿತಿ ನೀಡಬಹುದು. ನಾವು ಇಲ್ಲಿ ತುಂಬ ಹೊತ್ತು ಇರುವುದು ಸರಿಯಲ್ಲ’ ಎಂದು ಅಲ್ಲಿಂದ ಅರಣ್ಯದತ್ತ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಶಂಕಿತರ ಜತೆಗಿದ್ದ ಗನ್ ಅನ್ನು ಮನೆಯ ಗೋಡೆಗೆ ಒರಗಿಸಿಟ್ಟಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

ಈ ಸುದ್ದಿಯನ್ನು ಓದಿದ್ದೀರಾ.?ಬಾಯಿಯಲ್ಲಿ ನಿರೂರಿಸುವ ಈ ಮೀನು ತುಂಬಾ ಅಪಾಯಕಾರಿ

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ