• 27 ಜುಲೈ 2024

ವಾರಾಣಸಿಯಲ್ಲಿ ಮೋದಿ ಎದುರು ಕಾಂಗ್ರೆಸ್‌ನ ಅಜಯ್ ರಾಯ್ ಕಣಕ್ಕೆ.

 ವಾರಾಣಸಿಯಲ್ಲಿ ಮೋದಿ ಎದುರು ಕಾಂಗ್ರೆಸ್‌ನ ಅಜಯ್ ರಾಯ್ ಕಣಕ್ಕೆ.
Digiqole Ad

ವಾರಾಣಸಿಯಲ್ಲಿ ಮೋದಿ ಎದುರು ಕಾಂಗ್ರೆಸ್‌ನ ಅಜಯ್ ರಾಯ್ ಕಣಕ್ಕೆ.

ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಎರಡು ಬಾರಿ ಗೆದ್ದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯೂ ಇದೇ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸ್ಥಳೀಯ ಅಭ್ಯರ್ಥಿಯಲ್ಲದಿದ್ದರೂ ತಮ್ಮ ವರ್ಚಸ್ಸಿನಿಂದಲೇ ಇಲ್ಲಿ ಗೆಲ್ಲುತ್ತಿರುವ 73 ವರ್ಷದ ಮೋದಿ ಅವರಿಗೆ ಈ ಬಾರಿಯೂ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ. 2001ರಿಂದ 2014ರವರೆಗೆ ಗುಜರಾತ್‌ನ ಮುಖ್ಯಮುಂತ್ರಿಯಾಗಿದ್ದ ಅವರು ರಾಷ್ಟ್ರಮಟ್ಟದ ರಾಜಕಾರಣದಲ್ಲಿ ತಮ್ಮ ಛಾಪು ಮೂಡಿಸಲು ಆಯ್ದುಕೊಂಡಿರುವ ಕ್ಷೇತ್ರವೇ ವಾರಾಣಸಿ. ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ 2002ರಲ್ಲಿ ನಡೆದಿದ್ದ ಗಲಭೆಯ ಬಳಿಕ ಮೋದಿ ಅವರ ವಿರುದ್ಧ ತೀವ್ರ ಟೀಕೆಗಳು ಕೇಳಿ ಬಂದಿದ್ದರು ಕೂಡ ವಾರಾಣಸಿಯ ಮತದಾರರ ಅದನ್ನು ಪರಿಗಣಿಸಿರಲಿಲ್ಲ.

ಈ ಸುದ್ದಿಯನ್ನು ಓದಿದ್ದೀರಾ.?ಪಳಗಿದ ಆನೆ ನೋಡಲು ಹೋದ ದಂಪತಿಗಳನ್ನ ಅಟ್ಟಿಸಿಕೊಂಡು ಬಂದ ಕಾಡಾನೆ

2014ರಲ್ಲಿ ಎಎಪಿಯ ಅರವಿಂದ ಕೇಜ್ರವಾಲ್ ಅವರು ಇಲ್ಲಿ ಮೋದಿ ವಿರುದ್ಧ ಸ್ಪರ್ಧಿಸಿ ಸೋಲೋಪ್ಪಿಕೊಂಡಿದ್ದರು. ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್‌ ಈ ಬಾರಿ ಅಜಯ್ ರಾಯ್ ಅವರನ್ನು ಅಖಾಡಕ್ಕಿಳಿಸಿದೆ. 54 ವರ್ಷದ ಅಜಯ್ ಉತ್ತರ ಪ್ರದೇಶ ರಾಜ್ಯ ಘಟಕದ ಅಧ್ಯಕ್ಷರಾಗಿದ್ದಾರೆ. ಅದಕ್ಕಿಂತಲೂ ಹೆಚ್ಚಾಗಿ ಅವರು ಈ ಕ್ಷೇತ್ರದಲ್ಲಿ ಸ್ಥಳೀಯವಾಗಿ ಪ್ರಭಾವವಿರುವ ರಾಜಕಾರಣಿಯಾಗಿದ್ದಾರೆ.

ಬಿಜೆಪಿಯ ವಿದ್ಯಾರ್ಥಿ ಸಂಘಟನೆಯ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದ ಅವರು ಕೋಲಸ್ಲಾ ಕ್ಷೇತ್ರದಿಂದ ವಿಧಾನಸಭೆಗೆ ಮೂರು ಬಾರಿ ಬಿಜೆಪಿಯಿಂದ, ಒಮ್ಮೆ ಪಕ್ಷೇತರರಾಗಿ ಹಾಗೂ ಪಿಂದ್ರಾ ಕ್ಷೇತ್ರದಿಂದ ಕಾಂಗ್ರೆಸ್‌ ಶಾಸಕರಾಗಿ ಆಯ್ಕೆಯಾಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿದ್ದಕ್ಕೆ ಮುನಿಸಿಕೊಂಡಿದ್ದ ಅವರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡು, 2009ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಾಗೊಂಡಿದ್ದರು.

ಈ ಸುದ್ದಿಯನ್ನು ಓದಿದ್ದೀರಾ.?ತಾಳಿ ಕಟ್ಟುವ ಶುಭ ವೇಳೆ ಬಂದ ಮಾಜಿ ಲವ್ವರ್ ಕರಿಮಣಿ ಕಿತ್ತು ಕೊಂಡ

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ